ETV Bharat / state

ರಾಮನಗರ ಜಿಲ್ಲೆಯಲ್ಲೂ ರಾಸುಗಳಿಗೆ ಚರ್ಮಗಂಟು ರೋಗ: ಜಾತ್ರೆ, ಸಂತೆ ನಿಷೇಧ

ತಮಿಳುನಾಡಿನ ಗಡಿಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದೆ. ಅದರಲ್ಲೂ ಕನಕಪುರ ತಾಲೂಕಿನಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಗಡಿಗ್ರಾಮದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವ ಕಾರಣ ಚರ್ಮಗಂಟು ರೋಗ ಹೆಚ್ಚಾಗಿ ಬಾಧಿಸುತ್ತಿದೆ.

In Ramnagar district also skin disease in cattle Fair, Santhe banned
author img

By

Published : Oct 14, 2022, 5:19 PM IST

ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ. ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆಯ ಸಲುವಾಗಿ ಜಿಲ್ಲಾಡಳಿತ ಒಂದು ತಿಂಗಳ ಕಾಲ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಣೆ ನಿಷೇಧ ಮಾಡಿದೆ.

ತಮಿಳುನಾಡಿನ ಗಡಿಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದೆ. ಅದರಲ್ಲೂ ಕನಕಪುರ ತಾಲೂಕಿನಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಗಡಿಗ್ರಾಮದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವ ಕಾರಣ ಚರ್ಮಗಂಟು ರೋಗ ಹೆಚ್ಚಾಗಿ ಬಾಧಿಸುತ್ತಿದೆ.

ಕನಕಪುರದ ಜತೆಗೆ, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನಲ್ಲಿ ಪ್ರಕರಣಗಳು ಕಂಡುಬಂದಿವೆ. ಆದರೆ, ಮಾಗಡಿ ತಾಲೂಕಿನಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ರಾಮನಗರ ತಾಲೂಕಿನಲ್ಲಿ ಗೋಶಾಲೆಯಲ್ಲಿಯೂ ಕಾಯಿಲೆ ಕಾಣಿಸಿಕೊಂಡಿತ್ತು. ಪ್ರಸ್ತುತ ಕಡಿಮೆಯಾಗಿದೆ. ಒಟ್ಟಾರೆ ಜಿಲ್ಲೆಯ ಮೂರು ತಾಲೂಕಿನಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ.

ಇನ್ನು ಕಾಯಿಲೆ ಕಾಣಿಸಿಕೊಳ್ಳುತ್ತಿರುವ ಗ್ರಾಮ ಸೇರಿದಂತೆ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಗ್ರಾಮಗಳ ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ಈ ತನಕ ಒಟ್ಟು 6 ಸಾವಿರ ದನಗಳಿಗೆ ಲಸಿಕೆ ನೀಡಲಾಗಿದೆ. ಜತೆಗೆ ಇದೇ ತಿಂಗಳ 17ರಂದು ಕಾಯಿಲೆಗೆ ಸಂಬಂಧಿಸಿದ್ದ ವ್ಯಾಕ್ಸಿನ್ ವಿತರಣೆಯಾಗಲಿದ್ದು, ಸಾಮೂಹಿಕವಾಗಿ ಲಸಿಕೆ ನೀಡಲಾಗುತ್ತಿದೆ. ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ನಿಯಂತ್ರಣಾ ಸಂಬಂಧ ರೈತರಲ್ಲಿ ಸಾಕಷ್ಟು ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಕಾಯಿಲೆ ಕಾಣಿಸಿಕೊಂಡ ಗ್ರಾಮಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ.

ರೋಗ ಲಕ್ಷಣ ಹಾಗೂ ಮಾಡಬೇಕಾದ ಕ್ರಮದ ಕುರಿತು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ಅಲ್ಲದೇ, ಕರ ಪತ್ರ ಹಂಚಿ ಅರಿವು ಮೂಡಿಸುತ್ತಿದ್ದಾರೆ.

ಇದನ್ನೂ ಓದಿ: ಜಾನುವಾರು ಚರ್ಮಗಂಟು ರೋಗ: ಪರಿಹಾರ ಧನಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.