ETV Bharat / state

8 ವರ್ಷಗಳಿಂದ ಭಾರತದ ಸಂಸ್ಕೃತಿ ಹಾಗೂ ಪರಂಪರೆಗಳಿಗೆ ವಿಶ್ವಮಟ್ಟದ ಗೌರವ : ಎಸ್ ಜೈಶಂಕರ್ - ಪ್ರಭಾತ್​ ಪೇರಿ

ರಾಮನಗರ ಜಿಲ್ಲೆ ಹಾರೋಹಳ್ಳಿ ಬಳಿಯ ಜೈನ್ ವಿವಿ ಆವರಣದಲ್ಲಿ ನಡೆದ ಹರ್ ಘರ್ ತಿರಂಗಾ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ ನಂತರ ಪ್ರಭಾತ್​ ಪೇರಿ ನಡಿಗೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಿದರು.

Jaishankar at Harohalli in Ramanagara
ಹರ್ ಘರ್ ತಿರಂಗಾ
author img

By

Published : Aug 13, 2022, 3:56 PM IST

ರಾಮನಗರ : 40 ವರ್ಷಗಳ ಹಿಂದೆ ನಾನು ವಿದೇಶಾಂಗ ಸೇವೆಗೆ ಸೇರಿಕೊಂಡಾಗ ಜಾಗತಿಕ ಮಟ್ಟದಲ್ಲಿ ಭಾರತದ ದನಿಯೇ ಇರಲಿಲ್ಲ. ಆದರೆ ಪ್ರಧಾನಿ ಮೋದಿಯವರ ದಕ್ಷ ನಾಯಕತ್ವದಿಂದಾಗಿ ಈಗ ನಮ್ಮ ದನಿಗೆ ಅಭೂತಪೂರ್ವ ಬೆಲೆ ಬಂದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಜಿಲ್ಲೆ ಹಾರೋಹಳ್ಳಿ ಬಳಿಯ ಜೈನ್ ವಿವಿ ಆವರಣದಲ್ಲಿ ನಡೆದ ಹರ್ ಘರ್ ತಿರಂಗಾ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಪ್ರಭಾತ್​ ಪೇರಿ ನಡಿಗೆಯಲ್ಲಿ ಭಾಗವಹಿಸಿದರು. ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಣವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದರು.

at Harohalli in Ramanagara
ಜೈನ್ ವಿವಿ ಆವರಣದಲ್ಲಿ ನಡೆದ ಹರ್ ಘರ್ ತಿರಂಗಾ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ವಿದೇಶಾಂಗ ನೀತಿಯು ದೇಶದ ಜನರ ದಿನನಿತ್ಯದ ಬದುಕಿನ ಮೇಲೆ ಅಪಾರ ಪರಿಣಾಮ ಬೀರುತ್ತದೆ. ಇದರಲ್ಲಿ ಭಾರತೀಯರ ಹಿತಾಸಕ್ತಿ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ನಾವು ತಾಳುವ ನಿಲುವು ನಿರ್ಣಾಯಕ ಪಾತ್ರ ವಹಿಸುತ್ತವೆ. ಎಂಟು ವರ್ಷಗಳಿಂದ ಈಚೆಗೆ ನಮ್ಮ ಯೋಗ, ಆಹಾರ, ಅಧ್ಯಾತ್ಮ, ಸಂಸ್ಕೃತಿ ಹಾಗೂ ಪರಂಪರೆಗಳಿಗೆ ವಿಶ್ವ ಮಟ್ಟದಲ್ಲಿ ಅಪಾರ ಗೌರವ ಪ್ರಾಪ್ತಿಯಾಗಿದೆ ಎಂದು ವಿದೇಶಾಂಗ ಸಚಿವರು ಮಾಹಿತಿ ನೀಡಿದರು.

ಪ್ರಭಾತ್​ ಪೇರಿ ನಡಿಗೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್

ಮೋದಿ ಅವರ ನಾಯಕತ್ವವು ಜಗತ್ತಿಗೇ ಗೊತ್ತಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಜಗತ್ತಿನ ನಾನಾ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 70 ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ. ಹಾಗೆಯೇ ವಿದೇಶಗಳಲ್ಲಿ ಓದುತ್ತಿರುವ 12 ಲಕ್ಷ ಭಾರತೀಯ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವುದು ಸಾಧ್ಯವಾಗಿದೆ ಎಂದು ವಿವರಿಸಿದರು.

ಪರಸ್ಪರ ಬೆಸೆದುಕೊಂಡಿರುವ ಜಗತ್ತಿನಲ್ಲಿ ವಿದೇಶಾಂಗ ಸಚಿವರು ದೇಶದ ಹೂಡಿಕೆ, ತಂತ್ರಜ್ಞಾನ, ಮಧುರ ಬಾಂಧವ್ಯ, ಸಹಭಾಗಿತ್ವ, ಸಹಕಾರ ಇತ್ಯಾದಿಗಳನ್ನು ಗಮನಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾದ್ದು ಬಹಳ ಮುಖ್ಯ. ಉಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ ನಾವು ಕಡಿಮೆ ಬೆಲೆಗೆ ತೈಲೋತ್ಪನ್ನಗಳನ್ನು ಪಡೆದುಕೊಂಡಿರುವುದು ಇದಕ್ಕೆ ಸೂಕ್ತ ನಿದರ್ಶನವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ, ರಾಮನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಂಗವಾಗಿ 50 ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ ಎಂದರು.

ಮೋದಿ ಅವರ ನಾಯಕತ್ವದಡಿ ರಾಜ್ಯದಲ್ಲಿ ಎನ್ಇಪಿ ಜಾರಿಯಾಗುತ್ತಿದೆ. ಗುಣಮಟ್ಟದ ಶಿಕ್ಷಣ ನಮ್ಮಲ್ಲಿ ಇದ್ದು, ಉಚಿತವಾಗಿ ಅತ್ಯುತ್ತಮ ಕೋರ್ಸುಗಳನ್ನು ಕಡ್ಡಾಯವಾಗಿ ಕಲಿಸಲಾಗುತ್ತಿದೆ. ಜೈಶಂಕರ್ ಅವರಂತಹ ಪ್ರತಿಭಾವಂತರು ವಿದೇಶಾಂಗ ಸಚಿವರಾಗಿರುವುದು ದೇಶದ ಸುದೈವವಾಗಿದೆ. ಇಂತಹ ಸಮರ್ಥರಿಂದ ಭಾರತದ ದಿಕ್ಕುದೆಸೆಯೇ ಬದಲಾಗುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು.. ಸಿಎಂ ಬಸವರಾಜ ಬೊಮ್ಮಾಯಿ ಕರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.