ETV Bharat / state

ಚುನಾವಣೆ ಯಾವಾಗ ನಡೆದರೂ ನಾವು ಸಿದ್ಧ: ಇಡಿ - ಸಿಬಿಐ ಬಿಜೆಪಿ ಅಂಗ ಪಕ್ಷಗಳು ಎಂದ ಕುಮಾರಸ್ವಾಮಿ - ವಿಧಾನಸಭಾ ಚುನಾವಣೆಗೆ ನಾವು ಸಿದ್ಧ ಎಂದ ಕುಮಾರಸ್ವಾಮಿ

ರಾಜ್ಯದಲ್ಲಿ ಬಗೆ ಹರಿಸದ ನೂರಾರು ಸಮಸ್ಯೆಗಳಿವೆ. ಅದನ್ನು ಬಿಟ್ಟು ಬೇಡವಾದ ವಿಷಯಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆಂದು ಮಾಜಿ ಸಿಎಂ ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್​​ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ
Ex CM kumaraswamy
author img

By

Published : Mar 30, 2022, 12:22 PM IST

ರಾಮನಗರ: ಹಲಾಲ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ಬಂದರೆ ಚರ್ಚೆ ಮಾಡಬಹುದು. ಇವತ್ತು ಚುನಾವಣಾ ಸುಧಾರಣಾ ಬಗ್ಗೆ ಚರ್ಚೆ ಇದೆ. ಅಲ್ಲಿ ಅವಕಾಶ ಸಿಕ್ಕರೆ ಸಮಾಜದಲ್ಲಿ ಶಾಂತಿ ತರುವ ವಿಚಾರವಾಗಿ ಸಲಹೆ ಕೊಡ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​​ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಮನಗರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮತ್ತು ಪುರೋಹಿತ ರಾಜ್ಯ ಸಭೆಯಲ್ಲಿ ಭಾಗವಹಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಗೆ ಹರಿಸದ ನೂರಾರು ಸಮಸ್ಯೆಗಳಿವೆ. ಅದನ್ನು ಬಿಟ್ಟು ಬೇಡವಾದ ವಿಷಯಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಚುನಾವಣಾ ವರ್ಷ ಪ್ರಾರಂಭ ಆಗಿದೆ. ರಾಷ್ಟ್ರೀಯ ಪಕ್ಷಗಳ ನಾಯಕರು ಲಗ್ಗೆಯಿಟ್ಟು ಮತ ಪಡೆಯಲು ಪ್ರಾರಂಭ ಮಾಡುತ್ತಾರೆ. ಮೊದಲು ನಮ್ಮ ರಾಜ್ಯದ ನದಿ ನೀರಿನ ಸಮಸ್ಯೆ ಬಗೆಹರಿಸಿಕೊಂಡು ಬಂದು ಮತ ಕೇಳಲಿ. ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳ ನಾಯಕರು ಕೆಲಸ ಮಾಡಲಿ ಎಂದರು.

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಮಾಡಿರುವ ಅನ್ಯಾಯದ ಬಗ್ಗೆ ನನ್ನ ಹೋರಾಟ ಇದ್ದು, ಮುಂದಿನ 10ನೇ ತಾರೀಖಿನಿಂದ ನಮ್ಮ ಸಂಘಟನೆ ಪ್ರಾರಂಭ ಆಗಲಿದೆ. ಹೆಚ್ಚು ಪ್ರಚಾರ ಮಾಡಿ ಹೇಳುವ ಬದಲು, ನಿಮಗೆ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಹೋರಾಟ ತಿಳಿಯಲಿದೆ ಎಂದರು.

ಚುನಾವಣೆ ಯಾವಾಗ ನಡೆದರೂ ನಾವು ಸಿದ್ಧ: ಇಡಿ-ಸಿಬಿಐ ಬಿಜೆಪಿಯ ಅಂಗ ಪಕ್ಷಗಳು ಎಂದ ಕುಮಾರಸ್ವಾಮಿ

ಅವಧಿ ಪೂರ್ವ ಚುನಾವಣೆ ಆಗಬಹುದು: ರಾಜ್ಯದಲ್ಲಿ ಅವಧಿಗೂ ಮುನ್ನವೇ ಚುನಾವಣೆ ಬಂದರೂ ಅಚ್ಚರಿ ಇಲ್ಲ. ಗುಜರಾತ್ ಜತೆಗೆ ಕರ್ನಾಟಕದಲ್ಲಿಯೂ ಚುನಾವಣೆ ನಡೆದರೂ ನಡೆಯಬಹುದು. ಇಲ್ಲ ಮುಂದಿನ ಏಪ್ರಿಲ್​​ನಲ್ಲಿಯೂ ನಡೆಯಬಹುದು. ಯಾವಾಗ ನಡೆದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ತಮ್ಮ ತಾಯಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆಯ ನೋಟಿಸ್​ ಜಾರಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ನಾವು ಅಕ್ರಮ ಮಾಡದೇ, ಅಕ್ರಮವಾಗಿ ಆಸ್ತಿ ಸಂಪಾದಿಸದೇ ಇದ್ದಾಗ ನಾವೇಕೆ ನೋಟಿಸ್​ಗೆ ತಲೆಕೆಡಿಸಿಕೊಳ್ಳಬೇಕು. ಇಡಿ ಮತ್ತು ಸಿಬಿಐ ಬಿಜೆಪಿಯ ಅಂಗ ಪಕ್ಷಗಳು. ಅವುಗಳಿಂದ ನಮಗೆ, ನಮ್ಮ ಕುಟುಂಬಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಶೇಷ ಪೂಜಾ ಪೂಜೆ-ಹೋಮ: ಇದೇ ಸಂದರ್ಭದಲ್ಲಿ ಅರ್ಚಕರ ಸಂಘದ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜಾ ಕಾರ್ಯ ಹಾಗೂ ಹೋಮ ಕಾರ್ಯಕ್ರಮದಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡರು. ನಾಡಿನ ಜನರಲ್ಲಿ ಸುಖ ಶಾಂತಿ ಸಮೃದ್ಧಿ ತರಲಿ. ನಮ್ಮ ಜನ ನೆಮ್ಮದಿಯಿಂದ ಬದುಕುವ ವಾತಾವರಣ ನೀಡಲಿ ಎಂದು ಅವರು ಪ್ರಾರ್ಥಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 1000ಕ್ಕೂ ಹೆಚ್ಚಿನ ಅರ್ಚಕರು ಭಾಗವಹಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಅರ್ಚಕರು ಆಗಮಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿಎಸ್​ವೈ ಸ್ಪಷ್ಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.