ETV Bharat / state

ಡಿಕೆಶಿ ಕೋಟೆಯಲ್ಲಿ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಆರ್ ಅಶೋಕ್: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್ ಅಶೋಕ್ ಇಂದು ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.

Karnataka minister R Ashoka holds roadshow

author img

By

Published : Apr 18, 2023, 12:53 PM IST

Updated : Apr 18, 2023, 1:23 PM IST

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಘಟಾನುಘಟಿಗಳಿಂದ ಇಂದು ಕೂಡ ನಾಮಪತ್ರಗಳ ಭರಾಟೆ ಜೋರಾಗಿದೆ. ಕನಕಪುರದಲ್ಲಿ ಸಚಿವ ಆರ್.ಅಶೋಕ್, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಹಾಗೂ ಮಾಗಡಿಯಲ್ಲಿ ಹೆಚ್.ಸಿ. ಬಾಲಕೃಷ್ಣ ಹಾಗೂ ಎ. ಮಂಜುನಾಥ್ ತಮ್ಮ ತಮ್ಮ ಬೆಂಬಲಿಗರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

Karnataka minister R Ashoka holds roadshow
ಆರ್ ಅಶೋಕ್ ನಾಮಪತ್ರ ಸಲ್ಲಿಕೆ

ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ನಾಮಪತ್ರ: ರಾಜ್ಯ ಹೈವೋಲ್ಟೇಜ್ ಕ್ಷೇತ್ರದಲ್ಲಿ ಒಂದಾದ ಕನಕಪುರ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ನಾಮಪತ್ರ ಸಲ್ಲಿಸಿದರು. ತಾಲೂಕಿನ ಐತಿಹಾಸಿಕ ದೇಗುಲದಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಹೈಕಮಾಂಡ್​ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಆರ್. ಅಶೋಕ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಡಿಕೆಶಿ ಅಖಾಡದಲ್ಲಿ ಪ್ರಥಮ ಭಾರಿಗೆ ಕಮಲ ಅರಳಿಸಲು ಬಿಜೆಪಿ ಪ್ಲಾನ್ ರೂಪಿಸಿದೆ. ಹಾಗಾಗಿ ಕ್ಷೇತ್ರ ರಾಜಕೀಯ ರಂಗು ಪಡೆದಿದೆ. ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಆಗಮಿಸಿದ ಆರ್​ ಅಶೋಕ್​ ತಮ್ಮ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವ ಅಶ್ವತ್ಥನಾರಾಯಣ ಸಾಥ್ ನೀಡಿದರು.

ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಸಿ.ಪಿ‌.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣದಲ್ಲಿ ಸಿಪಿವೈ ನಾಮಪತ್ರ: ಮತ್ತೊಂದೆಡೆ ಹೈವೋಲ್ಟೇಜ್ ಕ್ಷೇತ್ರವಾದ ಬೊಂಬೆನಗರಿ ಚನ್ನಪಟ್ಟಣದಲ್ಲಿ ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ‌. ಯೋಗೇಶ್ವರ್ ಇಂದು ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಗರದ ಸ್ಪನ್ ಸಿಲ್ಸ್​ನಿಂದ ಹೊರಟ ಮೆರವಣಿಗೆ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

  • #WATCH | BJP leader & Karnataka minister R Ashoka holds roadshow as he heads to file nomination from Kanakapura Assembly seat in Bengaluru for upcoming assembly polls

    He will be contesting against Karnataka Congress president DK Shivakumar in this seat pic.twitter.com/4PsGfMme6W

    — ANI (@ANI) April 18, 2023 " class="align-text-top noRightClick twitterSection" data=" ">

ಮಾಗಡಿಯಲ್ಲಿ ನಾಮಪತ್ರ ಸಲ್ಲಿಕೆ: ಕೆಂಪೇಗೌಡ ಕೋಟೆ ಮಾಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಬಾಲಕೃಷ್ಣ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರೆ, ಜೆಡಿಎಸ್ ಅಭ್ಯರ್ಥಿಯಾದ ಎ. ಮಂಜುನಾಥ್‌ ಕೂಡ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

  • #WATCH | We have tremendous support from the people of Kanakapura, they want R Ashoka to become their MLA. He is going to win the election with a comfortable margin: Karnataka Minister CN Ashwath Narayan pic.twitter.com/IiZKWAsMK8

ಕ್ಷೇತ್ರದಿಂದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

Last Updated : Apr 18, 2023, 1:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.