ರಾಮನಗರ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಅವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.