ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಕೆಎಸ್ಆರ್ಟಿಸಿ ಬಸ್ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಬೊಮ್ಮನಾಯಕನಹಳ್ಳಿ ಗ್ರಾಮದಿಂದ ಚನ್ನಪಟ್ಟಣಕ್ಕೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದ ವೇಳೆ, ಬಸ್ನ ಆಕ್ಸಲ್ ಕಟ್ ಆಗಿದೆ. ಬಸ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಜನರೇ ಎಚ್ಚರ: ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ!
ಸಾರಿಗೆ ಇಲಾಖೆ ಹಳೇ ಬಸ್ಗಳನ್ನು ಬದಲಾಯಿಸಲು ವಿಫಲವಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಈ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಹಾಸ್ಯಾಸ್ಪದ ವಿಷಯ: ಸಿಎಂ ಬೊಮ್ಮಾಯಿ