ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ KSRTC ಸ್ಲೀಪರ್ ಕೋಚ್ ಬಸ್ ಪಲ್ಟಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಾಗೊಂಡಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಈ ದುರ್ಘಟನೆ ನಡೆದಿದ್ದು, ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ ಈ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಸ್ಲೀಪರ್ ಕೋಚ್ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿಯೇ ಪಲ್ಟಿ ಹೊಡೆದಿದೆ.
ಬಸ್ ನಲ್ಲಿ ಒಟ್ಟು 32 ಜನ ಪ್ರಯಾಣಿಸುತ್ತಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ವವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಸಂಬಂಧ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಭಾಯಿಸಿದ್ದಾರೆ.