ರಾಮನಗರ : ರಾಜ್ಯ ರಾಜಧಾನಿ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಎದುರಾಗಿದ್ದು, ಸಾರ್ವಜನಿಕರು ಆಸ್ಪತ್ರೆ ತೆರಳಲು ಹಿಂದೇಟು ಹಾಕುವಂತಾಗಿದೆ.
ಐಸಿಯು ತೀವ್ರ ನಿಗಾ ಘಟಕದಲ್ಲಿ ಶೌಚಾಲಯ ಕೂಡ ಇಲ್ಲ. ಜಿಲ್ಲಾಸ್ಪತ್ರೆಯಲ್ಲಿ ಶೌಚಾಲಯಕ್ಕೆ ಹೋದ್ರೆ ನೀರಿಲ್ಲ. ಅಲ್ಲದೆ ಸ್ವಚ್ಛತೆ ಮರೀಚಿಕೆಯಾಗಿದೆ. ಮಕ್ಕಳು ಬಾಣಂತಿಯರ ಘಟಕದಲ್ಲು ಸರಿಯಾದ ವ್ಯವಸ್ಥೆ ಇಲ್ಲದೆ ಬಾಣಂತಿಯರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಕೊರೊನಾದಿಂದ ಸಾವು ನೋವು ಹೆಚ್ಚಾಗಿದ್ದು, ಜಿಲ್ಲಾಡಳಿತ ಸಕಲ ಕ್ರಮಕೈಗೊಂಡು ಸಾರ್ವಜನಿಕರಿಗೆ ಸವಲತ್ತು ನೀಡುತ್ತಿದೆ. ಆದ್ರೆ, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಗ್ಗೆ ಅರಿವೇ ಇಲ್ಲ. ಅಷ್ಟೇ ಅಲ್ಲ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಹೆಚ್ಚು ರೋಗಿಗಳು ಅಡ್ಮಿಟ್ ಆಗುವುದರಿಂದ ಈ ಬಗ್ಗೆ ಹೆಚ್ಚು ಗಮನ ಹರಿಸಲಾಗುವುದಿಲ್ಲವೆಂದು ಎಂದಿದ್ದಾರೆ.
ಜಿಲ್ಲಾಸ್ಪತ್ರೆ ಇಬ್ಭಾಗ : ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಬಣಗಳಾಗಿದ್ದು, ತಾರತಮ್ಯ ಮತ್ತು ವೈಷಮ್ಯ ಹೆಚ್ಚಾಗಿ ರೋಗಿಗಳ ಮೇಲೆ ಪರಿಣಾಮ ಬೀರ್ತಿದೆ ಎಂಬ ಆರೋಪ ಕೇಳಿ ಬರ್ತಿದೆ.