ರಾಮನಗರ: ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು-ಕೊರತೆ ಸಭೆಗೆ ಸಾರ್ವಜನಿಕರ ಕೊರತೆ ಎದ್ದು ಕಾಣುತಿತ್ತು. ಒಟ್ಟಾರೆ ಸಭೆಯಲ್ಲಿ ಮೂವರು ಸಾರ್ವಜನಿಕರ ಅಹವಾಲು ಸಲ್ಲಿಕೆಯಾಗಿವೆ.
ಜಿಲ್ಲೆಯ ಚನ್ನಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆ ಕುರಿತು ಜನರಿಗೆ ಮಾಹಿತಿ ಇಲ್ಲದೇ ಇರುವುದು ಅಥವಾ ಪ್ರಚಾರದ ಕೊರತೆ ಹಿನ್ನೆಲೆ ಸಭೆಗೆ ಸಾರ್ವಜನಿಕರ ಸ್ಪಂದನೆ ಕಡಿಮೆಯಾಗಿತ್ತು.
ಅಧಿಕಾರಿಗಳು ಸೇರಿ 12 ಜನರು ಭಾಗಿಯಾಗಿದ್ದರು. ಎಸಿಬಿ ಇನ್ಸ್‌ಪೆಕ್ಟರ್ ಸತ್ಯನಾರಾಯಣಸ್ವಾಮಿ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಲೋಕೇಶ್ ಇದ್ದರು.