ರಾಮನಗರ: ಜಮೀನು ವಿವಾದ ಹಿನ್ನೆಲೆ ಗಲಾಟೆ ತಾರಕಕ್ಕೇರಿ 10ಕ್ಕೂ ಹೆಚ್ಚು ಕಿಡಿಗೇಡಿಗಳು ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.
ಕಮಲಮ್ಮ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ನಾಲ್ಕು ಎಕರೆ ಪ್ರದೇಶದಲ್ಲಿದ್ದ ತೋಟದ ಮನೆಗೆ ಏಕಾಏಕಿ ನುಗ್ಗಿದ 10ಕ್ಕೂ ಹೆಚ್ಚು ಮಂದಿ ಬೆಂಕಿ ಹಚ್ಚಿ, ಪಿಠೋಪಕರಣಗಳನ್ನ ಧ್ವಂಸಗೊಳಿಸಿ ದಾಂಧಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಎಂ.ಕೆ.ದೊಡ್ಡಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.