ರಾಮನಗರ: ಜಮೀನಿನಲ್ಲಿ ಕುರಿ ಕಾಯುತ್ತಿದ್ದ ಕುರಿಗಾಹಿಯ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ, ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ನರಸಿಂಹ(42) ಎಂಬ ಕುರಿಗಾಹಿ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ.
ಎಂದಿನಂತೆ ತಮ್ಮ ಜಮೀನಿನಲ್ಲಿ ಕುರಿ ಮೇಯಿಸುತ್ತಿರುವಾಗ, ಚಿರತೆಯು ಕುರಿಗಳನ್ನು ತಿನ್ನಲು ಬಂದಿದೆ. ಈ ವೇಳೆ ಅಡ್ಡ ಬಂದ ಕುರಿಗಾಹಿ ಮೇಲೂ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗಾಯಗೊಂಡಿರುವ ನರಸಿಂಹನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿ ಭೇಟಿ ಮಾಡಿದ್ದಾರೆ.