ರಾಮನಗರ : ನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ. ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ತಕ್ಷಣವೇ ಪ್ರಕಟಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್ ಅಶ್ವತ್ಥ್ ನಾರಾಯಣ್ ಈ ವಿಷಯವನ್ನು ತಿಳಿಸಿದ್ದಾರೆ.
ಘಟನೆ ಬಗ್ಗೆ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು.
ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆಸಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಓದಿ: ಮಾಸ್ಕ್ ಹಾಕದ ಸಿಎಂ, ರೂಲ್ಸ್ ನಿಮಗೆ ಅನ್ವಯಿಸುವುದಿಲ್ಲವೇ ಎಂದು ಸಾರ್ವಜನಿಕರ ಪ್ರಶ್ನೆ