ETV Bharat / state

ಮಳೆಯಿಂದ ಬೀದಿಗೆ ಬಿದ್ದ ಜನ.. ಶೀಘ್ರದಲ್ಲೇ ಮನೆ ಕಟ್ಟಿಸಿಕೊಡುವುದಾಗಿ ಸಚಿವ ಅಶ್ವತ್ಥ್​ ನಾರಾಯಣ್ ಅಭಯ ​ - ಮಾಯಸಂದ್ರ ಕೆರೆಗೆ ಬಾಗಿನ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರಿನಲ್ಲಿ ಕೆರೆಗೆ ನೀರು ನುಗ್ಗಿ ಮನೆಮಠ ಕಳೆದುಕೊಂಡಿರುವ 36 ಕುಟುಂಬಗಳಿಗೆ ಉಸ್ತುವಾರಿ ಸಚಿವ ಡಾ ಸಿ ಎನ್ ಅಶ್ವತ್ಥ್​ ನಾರಾಯಣ್​ ಪರಿಹಾರದ ಚೆಕ್ ವಿತರಿಸಿದರು.

ಪರಿಹಾರದ ಚೆಕ್ ವಿತರಿಸಿದ ಸಚಿವ ಅಶ್ವತ್ಥ್​ ನಾರಾಯಣ್

author img

By

Published : Aug 8, 2022, 6:15 PM IST

ರಾಮನಗರ: ಸತತ ಮತ್ತು ಮೇರೆ ಮೀರಿದ ಮಳೆಯಿಂದಾಗಿ ಕಂಗೆಟ್ಟಿರುವ ಜಿಲ್ಲೆಯ ನಾನಾ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಡಾ. ಸಿ. ಎನ್ ಅಶ್ವತ್ಥ್​ ನಾರಾಯಣ್​ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಜಿಲ್ಲೆಯ ಮಾಗಡಿ ತಾಲೂಕಿನ ಕುದೂರಿನಲ್ಲಿ ಕೆರೆಗೆ ನೀರು ನುಗ್ಗಿ ಮನೆಮಠ ಕಳೆದುಕೊಂಡಿರುವ 36 ಕುಟುಂಬಗಳಿಗೆ ತಲಾ 10 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾಗಡಿ ಶಾಸಕ ಮಂಜುನಾಥ್ ಇದ್ದರು.

ಜನರ ಸಮಸ್ಯೆಯನ್ನು ಆಲಿಸುತ್ತಿರುವ ಸಚಿವ ಅಶ್ವತ್ಥ್​ ನಾರಾಯಣ್

ನಂತರ ತುಂಬಿ ತುಳುಕುತ್ತಿರುವ ಮಾಯಸಂದ್ರ ಕೆರೆಗೆ ಬಾಗಿನ ಅರ್ಪಿಸಿದರು. ಈ ವೇಳೆ ಅವರು ಮನೆ ಕಳೆದುಕೊಂಡಿರುವ ಯಲ್ಲಾಪುರ, ಮುತ್ತುಗದಹಳ್ಳಿ, ಕೆಂಚನಪಾಳ್ಯದ ಒಟ್ಟು 7 ಮಂದಿಗೆ 5 ಲಕ್ಷ ರೂ. ಪರಿಹಾರ ವಿತರಿಸಿದರು. ಈ ಪೈಕಿ ಮನೆ ವಿಪರೀತ ಹಾನಿಗೊಳಗಾಗಿರುವ ಮೂವರಿಗೆ ತಲಾ 95 ಸಾವಿರ ರೂ. ನೀಡಲಾಯಿತು. ಬಳಿಕ ಈಡಿಗರ ಪಾಳ್ಯಕ್ಕೆ ಸಚಿವರು ತೆರಳಿ, ಉಕ್ಕಿ ಹರಿಯುತ್ತಿರುವ ಕಾಲುವೆಯನ್ನು ವೀಕ್ಷಿಸಿದರು.

ರಾಮನಗರದ ಮಳೆ ಪೀಡಿತ ಪ್ರದೇಶಕ್ಕೆ ಸಚಿವ ಅಶ್ವತ್ಥ್​ ನಾರಾಯಣ್ ಭೇಟಿ

ಆಗ ಊರಿನ ಜನರು ಸರಿಯಾದ ಸೇತುವೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಇದನ್ನು ಪೂರೈಸುವುದಾಗಿ ಆಶ್ವಾಸನೆ ಕೊಟ್ಟರು. ಬೆಳಗ್ಗೆ ಮೊದಲಿಗೆ ಸೋಲೂರು ಹೋಬಳಿಯ ಕೂಡ್ಲೂರು ಗೇಟ್​ನಲ್ಲಿ ಗೋಡೆ ಕುಸಿದು ಇಬ್ಬರು ನೇಪಾಳಿ ಮಕ್ಕಳು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ ಅಶ್ವತ್ಥ್​ ನಾರಾಯಣ್

ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, 'ಈ ಮಕ್ಕಳು ನೇಪಾಳಿ ಕುಟುಂಬಕ್ಕೆ ಸೇರಿದವರಾದ್ದರಿಂದ ಪರಿಹಾರ ಕೊಡಲು ತಾಂತ್ರಿಕ ಅಡಚಣೆಗಳಿವೆ. ಆದರೂ, ಪರಿಹಾರದ ಚೆಕ್ ಸಿದ್ಧಪಡಿಸಿ ಇಡಲಾಗಿದೆ. ಇರುವ ತೊಡಕುಗಳನ್ನು ನಿವಾರಿಸಿ 2-3 ದಿನಗಳಲ್ಲಿ ಚೆಕ್ ಕೊಡಲಾಗುವುದು' ಎಂದು ಭರವಸೆ ನೀಡಿದರು.

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಆಲಿಸಿದ ಸಚಿವ ಅಶ್ವತ್ಥ್​ ನಾರಾಯಣ್

ಎಲ್ಲರಿಗೂ ತಕ್ಷಣವೇ ಪರಿಹಾರ: ನೆರೆಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇದಕ್ಕೆ ಸಂಬಂಧಿಸಿದ ಖಾತೆಯಲ್ಲಿ 16 ಕೋಟಿ ರೂ. ಇದೆ. ತಹಶೀಲ್ದಾರ್ ಅವರ ಖಾತೆಯಲ್ಲಿ 2.5 ಕೋಟಿ ರೂ. ಹಣ ಇದೆ. ಆದ್ದರಿಂದ, ಯಾರೂ ತಪ್ಪು ಮಾಹಿತಿಯನ್ನು ನಂಬಬಾರದು' ಎಂದು ಅವರು ಹೇಳಿದರು. ನೆರೆಯಿಂದ ಸಂತ್ರಸ್ತರಾಗಿರುವ ಎಲ್ಲರಿಗೂ ತಕ್ಷಣವೇ ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಅಭಯ ನೀಡಿದರು.

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ಅಶ್ವತ್ಥ್​ ನಾರಾಯಣ್

ಕೆರೆಗೆ ಬಾಗಿನ ಅರ್ಪಣೆ: ನೆರೆ ಸಂಬಂಧದ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇವಕ್ಕೆಲ್ಲ ಕೇಂದ್ರ ಸರ್ಕಾರದ ಸಹಾಯವೂ ಇದೆ ಎಂದು ಅಶ್ವತ್ಥ್​ ನಾರಾಯಣ್​ ನುಡಿದರು. ಸಂಕೀಘಟ್ಟ ಕೆರೆಗೂ ಸಚಿವರು ಭೇಟಿ ನೀಡಿ ಬಾಗಿನ ಅರ್ಪಿಸಿದರು.

ಓದಿ: ರಾಷ್ಟದ್ವಜ ಬಣ್ಣ ಕೆಂಪು, ಬಿಳಿ, ಹಸಿರು ಅಂದ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.