ETV Bharat / state

ನೆಲೆ ಕಚ್ಚಿರುವ ಕಾಂಗ್ರೆಸ್​ ಪಕ್ಷಕ್ಕೆ ಯಾರು ಹೋಗಿ ಸೇರ್ತಾರೆ? - ಸಚಿವ ಅಶ್ವತ್ಥ್ ನಾರಾಯಣ - Ashwathth Narayan on dk shivakumar statement

ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚುತ್ತಿದೆ. ಕೆಲವು ಕಡೆ ಮಾತ್ರ ಪಕ್ಷ ನೆಲೆ ಉಳಿಸಿಕೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಅಂತಹ ಪಕ್ಷಕ್ಕೆ ಯಾರು ಹೋಗಿ‌ ಸೇರುತ್ತಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ ಟೀಕಿಸಿದ್ದಾರೆ..

minister Ashwathth Narayan reacts on congress leaders statement
ಕಾಂಗ್ರೆಸ್​ ನಾಯಕರ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ
author img

By

Published : Jan 26, 2022, 4:12 PM IST

ರಾಮನಗರ : ಸ್ವಂತ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳಿಗೆ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಇದು ಒಂದು ರೀತಿಯ ಹೊಸ ಪದ್ಧತಿ. ಬೇರೆ ರಾಜ್ಯಗಳಲ್ಲಿ‌ ಈ ರೀತಿಯ ಪದ್ಧತಿ ಇದೆ. ನಮ್ಮ ರಾಜ್ಯದಲ್ಲೂ ಆ ಪದ್ಧತಿ ಜಾರಿ ಮಾಡಲಾಗಿದೆ ಎಂದರು.

ರಾಮನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ‌ ಇಂತಹ ಬೆಳವಣಿಗೆ ಆಗಿದೆ. ಬೇರೆ ಬೇರೆ ಕ್ಷೇತ್ರದ ನಾಯಕರನ್ನು ಸ್ವಂತ ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಆ ಪದ್ಧತಿಯನ್ನು ನಮ್ಮ ರಾಜ್ಯದಲ್ಲೂ ಕೂಡ ಅನ್ವಯ ಮಾಡಲಾಗಿದೆ ಎಂದರು.

ಕಾಂಗ್ರೆಸ್​ ನಾಯಕರ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿರುವುದು..

ಬಿಜೆಪಿ ಶಾಸಕರು ಮತ್ತೆ ಕಾಂಗ್ರೆಸ್ ಸೇರುತ್ತಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚುತ್ತಿದೆ. ಕೆಲವು ಕಡೆ ಮಾತ್ರ ಪಕ್ಷ ನೆಲೆ ಉಳಿಸಿಕೊಂಡಿದೆ. ಮುಂದೆ ಅಂತಹ ಜಾಗದಲ್ಲೂ ನೆಲೆ ಕಳೆದುಕೊಳ್ಳುತ್ತದೆ.‌

ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಅಂತಹ ಪಕ್ಷಕ್ಕೆ ಯಾರು ಹೋಗಿ‌ ಸೇರುತ್ತಾರೆ. ಇನ್ನೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಇಲ್ಲ. ಆಗಲೇ ಮುಖ್ಯಮಂತ್ರಿ ಹುದ್ದೆಗೆ ಸರ್ಕಸ್ ಶುರುವಾಗಿದೆ. ಯಾರು ಸಿಎಂ ಎಂದು ಕಚ್ಚಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಮ್ಮಿಂದ ಯಾರು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೇವನಹಳ್ಳಿಯಲ್ಲಿ ಬಿಜೆಪಿ ಸಚಿವರು ಡಿಕೆಶಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಇಂತಹ ಸುದ್ದಿಗೆ ಯಾವುದೇ ರೀತಿಯ ಬೆಲೆ ಕೊಡುವುದಿಲ್ಲ. ನಮ್ಮ ಸಮಾಜದಲ್ಲಿ ವಂಶಾಧಾರಿತವಾಗಿ ರಾಜಕೀಯ ಮಾಡೋಕೆ ಅವಕಾಶವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ನಾಯಕರಾಗುವ ಅವಕಾಶ ಇದೆ. ಕುಟುಂಬ ರಾಜಕಾರಣ ಇರುವ ಯಾವುದೇ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದರು.

ಇದನ್ನೂ ಓದಿ: ನಿಮ್ಹಾನ್ಸ್​​​ಲ್ಲಿ ಅಡ್ಮಿಟ್ ಆಗಬೇಕಾದವರ ಬಗ್ಗೆ ನಾನು ಮಾತನಾಡಲ್ಲ: 'ರ-ಜಾ'ಗೆ ಡಿಕೆಶಿ ಟಾಂಗ್​

ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಕುಟುಂಬ ರಾಜಕಾರಣಕ್ಕೆ ರಾಜ್ಯದ ಜನರು ಇನ್ನೂ ಮುಂದೆ ಒತ್ತು ನೀಡೋಲ್ಲ ಎಂದು ಅಶ್ವತ್ಥ್ ನಾರಾಯಣ ಇದೇ ವೇಳೆ ತಿಳಿಸಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.