ETV Bharat / state

ಸಿ.ಪಿ ಯೋಗೇಶ್ವರ್‌ಗೆ ನಮ್ಮ ಕಾರ್ಯಕರ್ತರು ತಕ್ಕ ಉತ್ತರ ನೀಡಿದ್ದಾರೆ: ಅನಿತಾ ಕುಮಾರಸ್ವಾಮಿ

ಕಳೆದ 20 ವರ್ಷಗಳಿಂದ ಸಿಪಿವೈ ಮಾಡದ ಅಭಿವೃದ್ಧಿ ಮಾಜಿ ಸಿಎಂ ಹೆಚ್‌ಡಿಕೆ ಅವರ ಕಾಲದಲ್ಲಿ ಆಗಿದೆ. ಹೇಗಾದರೂ ತಮ್ಮ ರಾಜಕೀಯ ಅಸ್ತಿತ್ವವನ್ನು ಕ್ಷೇತ್ರದಲ್ಲಿ ಉಳಿಸಿಕೊಳ್ಳಬೇಕೆಂದು ಯೋಗೇಶ್ವರ್ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ- ಶಾಸಕಿ ಅನಿತಾ ಕುಮಾರಸ್ವಾಮಿ ಆರೋಪ.

MLA Anitha Kumaraswamy
ಶಾಸಕಿ ಅನಿತಾ ಕುಮಾರಸ್ವಾಮಿ
author img

By

Published : Oct 10, 2022, 7:40 AM IST

ರಾಮನಗರ: ಚನ್ನಪಟ್ಟಣದಲ್ಲಿ ರಾಜಕೀಯವಾಗಿ ಅಸ್ತಿತ್ವಗಳಿಸಲು ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ಮಾಡಲು ಮುಂದಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್‌ಗೆ ನಮ್ಮ ಕಾರ್ಯಕರ್ತರು ತಕ್ಕ ಉತ್ತರ ನೀಡಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದಲ್ಲಿನ ನೂತನ ರಿವೈಸ್ ರಿಟ್ರೀಟ್ ರೆಸಾರ್ಟ್‌ಗೆ ಅವರು ಭೇಟಿ ನೀಡಿದ್ದರು. ಕೆಆರ್‌ಡಿಎಲ್ ನಿಗಮದ ಅಧ್ಯಕ್ಷ, ಬಿಜೆಪಿ ಮುಖಂಡ ಎಂ.ರುದ್ರೇಶ್ ಮಾಲೀಕತ್ವದ ರೆಸಾರ್ಟ್ ಅನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದ ಬೆನ್ನಲ್ಲೇ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ಆಗಮಿಸಿ ಶುಭ ಕೋರಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್‌ಗೆ ಟಕ್ಕರ್ ನೀಡಿದ್ದಲ್ಲದೇ, ಒಬ್ಬ ಎಂಎಲ್‌ಸಿಗೆ ಹೆಚ್ಚಿನ ಅನುದಾನ ನೀಡಿದ ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡರು. ಕಳೆದ 20 ವರ್ಷಗಳಿಂದ ಸಿಪಿವೈ ಮಾಡದ ಅಭಿವೃದ್ಧಿ ಮಾಜಿ ಸಿಎಂ ಹೆಚ್‌ಡಿಕೆ ಅವರ ಕಾಲದಲ್ಲಿ ಆಗಿದೆ. ಹೇಗಾದರೂ ತಮ್ಮ ರಾಜಕೀಯ ಅಸ್ತಿತ್ವವನ್ನು ಕ್ಷೇತ್ರದಲ್ಲಿ ಉಳಿಸಿಕೊಳ್ಳಬೇಕೆಂದು ಯೋಗೇಶ್ವರ್ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಸಿಪಿ ಯೋಗೇಶ್ವರ್ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ವಾಗ್ದಾಳಿ

ಸರ್ಕಾರದ ಯಾವುದೇ ಅಭಿವೃದ್ಧಿ ಕಾರ್ಯ ಇರಲಿ ಸ್ಥಳೀಯ ಶಾಸಕರ ಗಮನಕ್ಕೆ ತರುವುದು ಶಿಷ್ಟಾಚಾರ. ಈ ವಿಚಾರ 20 ವರ್ಷಗಳ ಕಾಲ ಶಾಸಕರಾಗಿದ್ದವರಿಗೆ ಗೊತ್ತಿಲ್ಲದ ವಿಚಾರವಲ್ಲ. ಆದರೆ ಉದ್ದೇಶ ಪೂರ್ವಕವಾಗಿಯೇ ಸ್ಥಳೀಯ ಶಾಸಕರಾದ ಮಾಜಿ ಸಿಎಂ ಹೆಚ್‌ಡಿಕೆ ಅವರನ್ನು ಕಡೆಗಣಿಸಿ ಕಾರ್ಯಕ್ರಮ ಮಾಡಲು ಹೊರಟಿದ್ದರು. ಇದಕ್ಕೆ ಚನ್ನಪಟ್ಟಣದ ಜನತೆ ಹಾಗೂ ಜೆಡಿಎಸ್ ಕಾರ್ಯಕರ್ತರರು ತಕ್ಕ ಉತ್ತರ ನೀಡಿದ್ದಾರೆ ಎಂದರು.

50 ಕೋಟಿಗೂ ಹೆಚ್ಚಿನ ಅನುದಾನವನ್ನು ಸಿಪಿವೈ ಒಬ್ಬರಿಗೆ ನೀಡಲಾಗಿದೆ. ರಾಜ್ಯದಲ್ಲಿ ಮತ್ತ್ಯಾರು ಎಂಎಲ್‌ಸಿಗಳು ಇಲ್ವಾ?, ಅನುದಾನ ನೀಡಲು ಮತ್ತ್ಯಾವ ಕ್ಷೇತ್ರಗಳು ಇಲ್ಲವಾ? ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತರಿಸಬೇಕಿದೆ. ಎಲ್ಲಾ ಪಕ್ಷದ ಎಂಎಲ್‌ಸಿಗಳಿಗೂ ಈ ರೀತಿಯ ಅನುದಾನ ನೀಡಿ ಇತರೆ ಕ್ಷೇತ್ರಗಳ ಅಭಿವೃದ್ಧಿ ಕಡೆಗೂ ಸಿಎಂ ಬೊಮ್ಮಾಯಿ ಗಮನ ಹರಿಸಲಿ ಎಂದು ಅನಿತಾ ಕುಮಾರಸ್ವಾಮಿ ಆಗ್ರಹಿಸಿದರು.

ಇದನ್ನೂ ಓದಿ: ಹೆಚ್​ಡಿಡಿ, ಹೆಚ್​ಡಿಕೆ ವಿರುದ್ಧ ಮಾತನಾಡಿದವರ ಗತಿ ಏನಾಗಿದೆ ಗೊತ್ತಿದೆಯಲ್ಲ.. ರಾಜಣ್ಣಗೆ ಅನಿತಾ ಕುಮಾರಸ್ವಾಮಿ ವಾರ್ನಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.