ರಾಮನಗರ : ಮಾಜಿ ಕೇಂದ್ರ ಸಚಿವ ಮತ್ತು ಶಾಸಕ ಸಿಎಂ ಇಬ್ರಾಹಿಂರವರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.
ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ಹೆಚ್ಡಿಕೆ ಅವರನ್ನು ಕಾಂಗ್ರೆಸ್‌ನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅವರು ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದೆ.
ಇದನ್ನೂ ಓದಿ: ನಾವು ಯಾರಿಗೂ ಬಲವಂತ ಮಾಡುವುದಿಲ್ಲ, ಮತಾಂತರ ನಿಷೇಧ ಮಸೂದೆ ಅಗತ್ಯ ಇಲ್ಲ: ಆರ್ಚ್ಬಿಷಪ್