ರಾಮನಗರ : ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಗ್ರಾಮದಲ್ಲಿ ಸಂಜೀವಿನಿ-ಪ್ರಜಾ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾಸಿಕ ಸಂತೆಯನ್ನು ಆಯೋಜಿಸಲಾಗಿತ್ತು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಕಾರ್ಯಕ್ರಮ ಉದ್ಘಾಟನೆ ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಗೆ ವಿವಿಧ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಜೀವನೋಪಾಯಕ್ಕಾಗಿ ಸಂವರ್ಧನ ಸಂಸ್ಥೆಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಸಂಘದಿಂದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾಸಿಕ ಸಂತೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ತುಂಬಾ ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಯೋಜನಾ ನಿರ್ದೇಶಕರು, ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳು ಸಹಾಯಕ ನಿರ್ದೇಶಕರು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಿನೋದ್ ಕುಮಾರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ: ನಾಡಿನಾದ್ಯಂತ ಯುಗಾದಿ ಸಂಭ್ರಮ: ಬೆಂಗಳೂರಿನ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ