ಮೈಸೂರು/ ರಾಮನಗರ: ಅರಮನೆ ನಗರಿಯಲ್ಲಿ ಸಾರಿಗೆ ಮುಷ್ಕರಕ್ಕೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಸಾರಿಗೆ ಬಸ್ಗಳು ಸಂಚರಿಸುತ್ತಿವೆ.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ, ನಗರದಲ್ಲಿ ಹಾಗೂ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.ಈ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದ್ದೀವೆ, ಆದರೆ ಕರ್ತವ್ಯಕ್ಕೆ ಹಾಜರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ ಎನ್ನುತ್ತಾರೆ ಹೆರಸರನ್ನು ಹೇಳಲು ಇಚ್ಚಿಸದ ನಗರ ಸಾರಿಗೆ ಬಸ್ ಚಾಲಕ.
ರಾಮನಗರದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ:
ಮುಷ್ಕರದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ. ಎಂದಿನಂತೆ ಬೆಂಗಳೂರು ಮೈಸೂರು ಕಡೆಗೆ ಬಸ್ ಸಂಚಾರ ಇದ್ದು, ಶಾಲಾ- ಕಾಲೇಜು, ಕೆಲಸಕ್ಕೆ ತೆರಳಬೇಕಾದವರಿಗೆ ಯಾವುದೇ ತೊಂದರೆ ಇಲ್ಲ. ಸಹಜವಾಗಿ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು, ಕೆಲವು ನೌಕರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.