ETV Bharat / state

ರಾಮನಗರ: ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಕೇಶ್ ಕುಮಾರ್ ಅಧಿಕಾರ ಸ್ವೀಕಾರ - ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸುದ್ದಿ

2012ನೇ ಬ್ಯಾಚ್​ನ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್ ಕೆ. ಅವರು ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು.

new DC to Ramanagar
ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ
author img

By

Published : Mar 2, 2021, 7:46 PM IST

ರಾಮನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಕೇಶ್ ಕುಮಾರ್ ಕೆ. ಅಧಿಕಾರ ಸ್ವೀಕರಿಸಿದರು.

ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಪದವಿ, ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಅಗ್ರಿಕಲ್ಚರ್ ಸೈನ್ಸ್​ನಲ್ಲಿ ಎಂ.ಎಸ್ಸಿ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

new DC to Ramanagar
ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್

2012ನೇ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಜಮಖಂಡಿಯಲ್ಲಿ ಉಪವಿಭಾಗಾಧಿಕಾರಿಯಾಗಿಯೂ, ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಹಾಗೂ ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ನಂತರ, ಜಿಲ್ಲಾ ಸಂಕೀರ್ಣದಲ್ಲಿರುವ ಪ್ರವಾಸೋದ್ಯಮ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇನ್ನಿತರ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.