ರಾಮನಗರ: ರೇಷ್ಮೆನಗರಿ ರಾಮನಗರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೀವ ರಕ್ಷಕ ಸೇವೆಗೆ ಪಣ ತೊಟ್ಟಿದ್ದಾರೆ. ನುಡಿದಂತೆ ರಾಮನಗರ ಜನರಿಗಾಗಿ ಎರಡು ಆ್ಯಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
ಓದಿ: ಸರ್ಕಾರಕ್ಕಿಂತ ದಾನಿಗಳು ಹೆಚ್ಚು ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿದ್ದಾರೆ: ಶಾಸಕ ಜಮೀರ್ ಅಹಮದ್
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎರಡು ಆ್ಯಂಬುಲೆನ್ಸ್ ನೀಡಿದ್ದಾರೆ. ಇಂದು ರಾಮನಗರ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಗೆ ಎರಡು ಆ್ಯಂಬುಲೆನ್ಸ್ ಕೊಡಲಾಯಿತು.
ನಂತರ ಮಾ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕೋವಿಡ್ ಎರಡನೇ ಅಲೆ ಹೆಚ್ಚಾಗಿದೆ. ಸಾವು-ನೋವುಗಳು ಹೆಚ್ಚಾಗಿದ್ದು, ಮೊನ್ನೆ ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಅಧಿಕಾರಿಗಳು ತಾಲೂಕಿನಲ್ಲಿ ಆ್ಯಂಬುಲೆನ್ಸ್ ಕೊರತೆ ಇರುವುದಾಗಿ ತಿಳಿಸಿದ್ದರು. ಹಾಗಾಗಿ ರಾಮನಗರಕ್ಕೆ ಎರಡು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಇನ್ನೂ ಇದರ ಜೊತೆಗೆ ಊಟದ ಸಮಸ್ಯೆ ಎದುರಾಗಿದೆ ಅಂತಲೂ ಗೊತ್ತಾಗಿತ್ತು. ಅದಕ್ಕೂ ಕೂಡ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದರು.