ರಾಮನಗರ: ಅನಾರೋಗ್ಯದಿಂದ ಸಾವನ್ನಪ್ಪಿದ್ದ ಜೆಡಿಎಸ್ ಕಾರ್ಯಕರ್ತ ಶ್ರೀಧರ್ ಮನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕಳೆದ ಜನವರಿ 22ರಂದು ಅನಾರೋಗ್ಯದಿಂದ ಶ್ರೀಧರ್ ಸಾವನ್ನಪ್ಪಿದ್ದು, ಇಂದು ರಾಮನಗರ ಜಿಲ್ಲೆಯ ನಾರಾಯಣಪುರ ಗ್ರಾಮದಲ್ಲಿರುವ ಶ್ರೀಧರ್ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಶ್ರೀಧರ್ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.
ಇನ್ನು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಇದೇ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಭರವಸೆ ನೀಡಿದರು.