ರಾಮನಗರ : ಚಲಿಸುತ್ತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದಿದೆ.
ಮಂಡ್ಯದಿಂದ ಬೆಂಗಳೂರಿಗೆ ರೋಗಿಯನ್ನು ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕನ ಪಕ್ಕದಲ್ಲಿ ಕುಳಿತಿದ್ದ ರೋಗಿಯ ಸಂಬಂಧಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಚಿರತೆ ಓಡಾಟದ ಚಿತ್ರ ಸೆರೆ - ಸ್ಥಳೀಯರಲ್ಲಿ ಆತಂಕ
ಸಾವನ್ನಪ್ಪಿದವರ ಮೃತದೇಹ ಹಾಗೂ ಆ್ಯಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.