ರಾಮನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ವೊಬ್ಬರುಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತ ಪೊಲೀಸ್ ಸಿಬ್ಬಂದಿಯಾಗಿದ್ದು, ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿಕಾರ್ಯ ನಿರ್ವಹಿಸುತ್ತಿದ್ದರು.
ಕಗ್ಗಲೀಪುರದಿಂದ ಬೈಕ್ನಲ್ಲಿ ರಾಮನಗರಕ್ಕೆ ವಾಪಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಂದ್ರಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಸೋಮವಾರ ಚಂದ್ರಶೇಖರ್ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಇದರ ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.