ETV Bharat / state

ತರಬೇತಿ ಪಡೆಯುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್ ಕುಸಿದು ಬಿದ್ದು ಸಾವು..! - channapattana training center

ಚನ್ನಪಟ್ಟಣದಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರು ದಿಢೀರ್ ಕುಸಿದು ಬಿದ್ದಿದ್ದಾರೆ. ಹಿರಿಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಕ್ರಮ ಕೈಗೊಳ್ಳುವಂತೆ ತರಬೇತಿ ಪಡೆಯುತ್ತಿದ್ದ ಸಿಬ್ಬಂದಿ ಒತ್ತಾಯ ಮಾಡಿದರು.

Policeman died after collapses while training channapattana
ಮೃತ ಕಾನ್ಸ್​ಟೇಬಲ್
author img

By

Published : Aug 12, 2021, 7:56 PM IST

ರಾಮನಗರ: ತರಬೇತಿ ಪಡೆಯುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ತರಬೇತಿ ಪಡೆಯುತ್ತಿದ್ದ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಪೊಲೀಸ್​ ಆಗಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು.

Policeman died after collapses while training channapattana
ಮೃತ ಕಾನ್ಸ್​ಟೇಬಲ್

ಮೃತ ಕಾನ್ಸ್​ಟೇಬಲ್ ಮೂಲತಃ ಗದಗ ಜಿಲ್ಲೆಯ ನರಗುಂದ ತಾಲೂಕಿನವರಾಗಿದ್ದು ಎರಡೂವರೆ ತಿಂಗಳಿನಿಂದ ಚನ್ನಪಟ್ಟಣ ತಾಲೂಕಿನ ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು. ಸೈನಿಕನಾಗಿ ಸೇವೆ ಸಲ್ಲಿಸಿದ ಎಲ್ಲಪ್ಪ, ತರಬೇತಿ ಪಡೆಯುತ್ತಿದ್ದಾಗ ಕುಸಿದು ಬಿದ್ದಿದ್ದು, ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ‌ ಎಂಬ ಆರೋಪ ಕೇಳಿ ಬಂದಿದೆ.

ಘಟನೆ ಖಂಡಿಸಿ ಉಳಿದ ಸಿಬ್ಬಂದಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.