ETV Bharat / state

ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಪ್ರತಾಪ್ ಸಿಂಹ - ರಾಜಕೀಯ ಚಟುವಟಿಕೆ

ಬಿಡದಿಯಲ್ಲಿರುವ ಹೆಚ್​.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿರುವ ಸಂಸದ ಪ್ರತಾಪ್​ ಸಿಂಹ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

MP Pratap Simha met Former CM HDK in Bidadi
ಮಾಜಿ ಸಿಎಂ ಹೆಚ್​ಡಿಕೆ ಸಂಸದ ಪ್ರತಾಪ್ ಸಿಂಹ ಭೇಟಿ
author img

By ETV Bharat Karnataka Team

Published : Jan 12, 2024, 1:10 PM IST

Updated : Jan 12, 2024, 3:54 PM IST

ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕೇತುಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ಮನೆಗೆ ಆಗಮಿಸಿ, ಹೆಚ್‌ಡಿಕೆ ಅವರನ್ನು ಭೇಟಿಯಾದ ಪ್ರತಾಪ್ ಸಿಂಹ, ಕೆಲ ಕಾಲ ಚರ್ಚೆ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆಯಿಡುವ ಸಾಧ್ಯತೆ ಇದೆ.

  • ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ @hd_kumaraswamy ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ. pic.twitter.com/u5P0t3GlKq

    — Pratap Simha (@mepratap) January 12, 2024 " class="align-text-top noRightClick twitterSection" data=" ">

ಭೇಟಿ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಸಂಸದ ಪ್ರತಾಪ್​ ಸಿಂಹ, ''ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ'' ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾನು ಖಂಡಿತ ನ್ಯಾಷನಲ್ ಲೀಡರ್ ಅಲ್ಲ: ಯತೀಂದ್ರ ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

Last Updated : Jan 12, 2024, 3:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.