ರಾಮನಗರ: ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ರಾಮನಗರ ಜೈಲಿನಲ್ಲಿ ಇಡಲಾಗಿದ್ದ ಆರೋಪಿಗಳ ಪೈಕಿ 5 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಆರೋಪಿಗಳಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಬೆಂಗಳೂರಿನ ಹಜ್ ಭವನಕ್ಕೆ ಇವರನ್ನೆಲ್ಲಾ ಸ್ಥಳಾಂತರಿಸಲಾಗಿದೆ. ಸ್ಯಾನಿಟೈಸರ್ ಹಾಗೂ ಮಾಸ್ಕ್ ನೀಡುವ ಮೂಲಕ ಅವರ ಸಂಪರ್ಕಕ್ಕೆ ಬಂದಿದ್ದ ನಗರಸಭೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಿ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ಇದೀಗ ರಾಮನಗರ ಜೈಲಿನ ಸಿಬ್ಬಂದಿಯನ್ನೂ ಪ್ರತ್ಯೇಕಗೊಳಿಸಲಾಗಿದೆ.
ಸುಮಾರು 15ಕ್ಕೂ ಹೆಚ್ಚು ಮಂದಿಯನ್ನ ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಯಾರೆಲ್ಲಾ ಅವರ ಸಂಪರ್ಕಕ್ಕೆ ಬಂದಿದ್ದಾರೆ ಎಂಬುದರ ವಿಡಿಯೋ ವೀಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ.