ರಾಮನಗರ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ರೇಷ್ಮೆ ನಗರಿ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಮವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿ ವಿವರ ಘೋಷಣೆ ಮಾಡಿಕೊಂಡಿದ್ದಾರೆ. ಈ ಇಬ್ಬರ ನಾಯಕರ ಆಸ್ತಿ ವಿವರ ಹೀಗಿದೆ..
ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಸ್ತಿ ವಿವರ:
ಚರಾಸ್ತಿ: 46.51ಕೋಟಿ ರೂ.
ಸ್ಥಿರಾಸ್ತಿ : 28 ಕೋಟಿ ರೂ.
ಒಡವೆ: 1.151 ಕೆಜಿ ಚಿನ್ನ
ಸಾಲ: 38.94 ಕೋಟಿ ರೂ.
ವಾಹನಗಳು: ಲ್ಯಾಂಬೋರ್ಗಿನಿ ಸಹಿತ ಒಟ್ಟು 5 ಕಾರುಗಳು - 5.67 ಕೋಟಿ ರೂ.ಗಳು
ವಾರ್ಷಿಕ ಆದಾಯ: 4.28 ಕೋಟಿ ರೂ. (2021-22)
ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಆಸ್ತಿ ವಿವರ:
ಚರಾಸ್ತಿ: 5.13 ಕೋಟಿ ರೂ.
ಸ್ಥಿರಾಸ್ತಿ: 54.23 ಕೋಟಿ ರೂ.
ಒಡವೆ: 500 ಗ್ರಾಂ ಚಿನ್ನ
ಸಾಲ: 8.71 ಕೋಟಿ ರೂ.
ವಾಹನಗಳು: ಫಾರ್ಚುನರ್ ಸೇರಿದಂತೆ ವಿವಿಧ ವಾಹನಗಳು
ವಾರ್ಷಿಕ ಆದಾಯ: 66.30 ಲಕ್ಷ ರೂ (2021-22)
ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ, ಹೆಚ್.ಸಿ. ಬಾಲಕೃಷ್ಣ, ಎ.ಮಂಜುನಾಥ್, ಇಕ್ಬಾಲ್ ಹುಸೇನ್, ಗಂಗಾಧರ್ ಸೇರಿದಂತೆ ಹಲವು ನಾಯಕರು ಅಭಿಮಾನಿಗಳೊಂದಿಗೆ ಸೋಮವಾರ(ನಿನ್ನೆ) ನಾಮಪತ್ರ ಸಲ್ಲಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಿಂದ ಹೆಚ್‌ಡಿಕೆ: ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಏ.17 ರಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೃಹತ್ ಜನಸ್ತೋಮದ ನಡುವೆ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ಕುಮಾರಸ್ವಾಮಿ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.
ರೇಷ್ಮೆನಗರಿಯಲ್ಲಿ ನಿಖಿಲ್ ನಾಮಪತ್ರ: ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅನಿತಾ ಕುಮಾರಸ್ವಾಮಿ ಸೇರಿದಂತೆ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನಾಡ ದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತಾಲೂಕು ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಕೂಡ ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023.. ರಾಮನಗರದಲ್ಲಿ ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ
ಹೆಚ್‌ಡಿಕೆ ಆಸ್ತಿ 189 ಕೋಟಿ: ಚನ್ನಪಟ್ಟಣದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬವು ಸದ್ಯ ₹189.27 ಕೋಟಿ ಮೌಲ್ಯದ ಆಸ್ತಿ ಘೋಷಣೆ ಮಾಡಿಕೊಂಡಿದೆ. ಕುಮಾರಸ್ವಾಮಿ–ಅನಿತಾ ದಂಪತಿ ಒಟ್ಟಾಗಿ ₹92.84 ಕೋಟಿ ಮೊತ್ತದ ಸ್ಥಿರಾಸ್ತಿ ಹಾಗೂ ₹96.43 ಕೋಟಿ ಮೊತ್ತದ ಚರಾಸ್ತಿಯನ್ನು ಹೊಂದಿದ್ದಾರೆ.
ಇದನ್ನೂ ಓದಿ: ಡಿ ಕೆ ಶಿವಕುಮಾರ್ ₹1,414 ಕೋಟಿ ಮೌಲ್ಯದ ಆಸ್ತಿ ಒಡೆಯ.. ಹೆಚ್ ಡಿ ಕುಮಾರಸ್ವಾಮಿ ಒಟ್ಟು ಆಸ್ತಿ ಎಷ್ಟು?