ರಾಮನಗರ: ನಗರದ ಉಪ ನೋಂದಣಿ ಕಚೇರಿಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿದ್ದ ಪೈಲೆಟ್ ಪ್ರಾಜೆಕ್ಟ್ ಆನ್ಲೈನ್ ಸಮಸ್ಯೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು.
ಸರ್ಕಾರಕ್ಕೆ ಹೆಚ್ಚಿನ ಆದಾಯಗಳಿರುವ ಕಚೇರಿಗಳಲ್ಲಿ ಉಪ ನೋಂದಣಿ ಕಚೇರಿಗಳಿವೆ. ಇ-ಆಡಳಿತದ ಭಾಗವಾಗಿ ಹಾಗೂ ಪಾರದರ್ಶಕ ವ್ಯವಸ್ಥೆ ತರುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಆನ್ಲೈನ್ ವ್ಯವಸ್ಥೆಯಲ್ಲಿ ಲೋಷದೋಷಗಳು ಕಂಡು ಬಂದಿದೆ. ಇದನ್ನು ಬಂಡವಾಳ ಮಾಡಿಕೊಂಡು, ಸಿಬ್ಬಂದಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.
ಹಾಗಾಗಿ ಈ ಕೂಡಲೇ ಸಮಸ್ಯೆಗೆ ಪರಿಹಾರ ನೀಡಬೇಕು. ಇಲ್ಲವೇ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದರು.
ಪ್ರಯೋಗಿಕವಾಗಿ ರಾಮನಗರ ಹಾಗೂ ಕನಕಪುರದಲ್ಲಿ ಜಾರಿಯಾಗಿದೆ. ಇಲ್ಲಿನ ಸಮಸ್ಯೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು. ಆದರೆ, ಇದುವರೆಗೂ ಯಾವುದೇ ದೂರು ನೀಡಿಲ್ಲ ಎಂದು ಉಪನೋಂದಣಾಧಿಕಾರಿ ನಾಗರಾಜ್ ಉತ್ತರಿಸಿದ್ದಾರೆ.