ರಾಮನಗರ: ಉತ್ತರ ಪ್ರದೇಶದಲ್ಲಿ ನಡೆದ ಯುವತಿಯ ಗ್ಯಾಂಗ್‌ರೇಪ್ ಪ್ರಕರಣವನ್ನು ಖಂಡಿಸಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಎದುರು ಸಮತಾ ಸೈನಿಕ ದಳ ಹಾಗೂ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸರಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಉತ್ತರಪ್ರದೇಶದ ಪೊಲೀಸರು ಸಹ ಗೂಂಡಾಗಳಂತೆ ವರ್ತಿಸಿದ್ದಾರೆ. ಸಾವನ್ನಪ್ಪಿದ ಯುವತಿಯ ಮೃತದೇಹವನ್ನು ಕುಟುಂಬಸ್ಥರಿಗೂ ನೀಡದೇ ತಾವೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಹಾಗಾಗಿ ಅಲ್ಲಿನ ಸರ್ಕಾರ ಸರ್ವಾಧಿಕಾರಿತನವನ್ನು ಪ್ರದರ್ಶನ ಮಾಡಿದೆ. ಆದ್ದರಿಂದ ಈ ಕೂಡಲೇ ಯೋಗಿ ಆದಿತ್ಯನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.