ರಾಮನಗರ: ಖಾಸಗಿ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಶಾಂತಿನಿಕೇತನ ಕಾಲೇಜಿನ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರದ ಮುಂಭಾಗ ಸಮಾವೇಶಗೊಂಡ ಶಿಕ್ಷಕರು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ವಿಮಾ ಸೌಲಭ್ಯ ಒದಗಿಸಬೇಕು. ಆರ್.ಟಿ.ಇ ಹಣ ಬಿಡುಗಡೆ ಮಾಡಬೇಕು, ಕೊರೊನಾ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂಬ ಆಗ್ರಹದೊಂದಿಗೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ನಂತರ ಎಸ್ಎಸ್ಎಲ್ಸಿ ಮೌಲ್ಯಮಾಪನಕ್ಕೆ ತೆರಳಿದ ಶಿಕ್ಷಕರು, ಮಕ್ಕಳ ಭವಿಷ್ಯದ ದೃಷ್ಠಿಯಿಂದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮೌಲ್ಯಮಾಪನದ ವೇಳೆ ನೀಡುವ ವೇತನ ಕೂಡ ಪಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.