ರಾಮನಗರ: ಇಲ್ಲಿನ ಮಾಯಗಾನಹಳ್ಳಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟಿರುವುದಾಗಿ ಆರೋಪಿಸಿದ ಕುಟುಂಬಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಕೇತೋಹಳ್ಳಿ ನಿವಾಸಿ ರೇಣುಕಪ್ಪ(60) ಎಂಬವರಿಗೆ ಅಪಘಾತವಾದ ವೇಳೆ ಜೀವ ಇತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೂಕ್ತ ಚಿಕಿತ್ಸೆ ನೀಡದೇ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಮುಂಭಾಗ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ಬ್ರಾಹ್ಮಣ ಸಂಘದ ಸದಸ್ಯತ್ವ ರದ್ದು; ತಲೆ ಬೋಳಿಸಿಕೊಂಡು ಪ್ರತಿಭಟನೆ