ರಾಮನಗರ: ಕನಕಪುರದ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರ ದಿನದಿಂದ ದಿನಕ್ಕೆಹೊಸತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಇದನ್ನು ಗಂಬೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇದೇ 13 ನೇ ತಾರೀಖು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಉದ್ದೇಶಿತ ಕಪಾಲಬೆಟ್ಟದ ಆ ಜಾಗ ಸರ್ಕಾರಿ ಗೋಮಾಳ, ಅಲ್ಲಿ ಅನಧಿಕೃತವಾಗಿ ಪ್ರತಿಮೆ ನಿರ್ಮಾಣ ಮಾಡ್ತಿರೋದು ತಪ್ಪು , ಅದು ಅರಣ್ಯ ಭೂಮಿ ವ್ಯಾಪ್ತಿಯಲ್ಲಿ ಇರೋದ್ರಿಂದ ಹಾಗೂ ಗೋಮಾಳದಲ್ಲಿ ಯಾವುದೇ ಅನುಮತಿ ಪಡೆಯದೇ ನಿರ್ಮಿಸಲಾಗ್ತಿದೆ. ಇದರ ವಿರುದ್ಧ ಜಿಲ್ಲೆಯಾದ್ಯಂತ ಎಲ್ಲರೂ ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ, ನಾವು ಶಾಂತಿ ಪ್ರಿಯರು ಶಾಂತಿಯುತವಾಗಿ ಪ್ರತಿಭಟನೆ ಮಾಡ್ತೇವೆ, ಬೆಟ್ಟಕ್ಕೂ ಹೋಗ್ತೇವೆ, ನಂತರ ಕನಕಪುರದಲ್ಲಿ ಜನಜಾಗೃತಿ ಮೂಡಿಸ್ತೇವೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದರು.