ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಎಂ ಕುಮಾರಸ್ವಾಮಿ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿನ ಗಾಂಧಿ ಭವನದಿಂದ ತಾಲೂಕು ಕಚೇರಿಯವರೆಗೆ ಸೋಮವಾರ ಸರ್ಕಾರದ ವೈಫಲ್ಯ ಖಂಡಿಸಿ, ರೈತ ಸಂಘದ ಕಾರ್ಯಕರ್ತರು ಎತ್ತಿನಗಾಡಿ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ತಾಲೂಕಿನಲ್ಲಿ ಹತ್ತಾರು ಸಮಸ್ಯೆಗಳು ತಲೆದೋರಿದ್ದು, ಇದ್ಯಾವುದಕ್ಕೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇನ್ನಾದರೂ ಮುಖ್ಯಂತ್ರಿಯವರು ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಈಗ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಬೇಡಿಕೆ ಈಡೇರದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ.