ರಾಮನಗರ: ಉಪನ್ಯಾಸಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದಲ್ಲಿ ನಡೆದಿದೆ.
ಮಾಕಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂಜಯ್ ಮೇಲೆ ಇಂಗ್ಲಿಷ್ ಉಪನ್ಯಾಸಕ ಚಂದ್ರಶೇಖರ್ ವಿನಾಕಾರಣ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ದೂರಿದ್ದಾರೆ.
ವಿದ್ಯಾರ್ಥಿಯ ಕೈ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಶಟಲ್ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದು, ರಕ್ತ ಬರುವಂತೆ ಥಳಿಸಲಾಗಿದೆ. ಗಾಯಾಳು ವಿದ್ಯಾರ್ಥಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಡಿಯೋ: ಕಾಲೇಜು ಕೊಠಡಿ ಪ್ರವೇಶಿಸಿದ ಚಿರತೆ, ಗಾಯಗೊಂಡ ವಿದ್ಯಾರ್ಥಿ