ETV Bharat / state

ಆರ್ಚಕನಹಳ್ಳಿಯಲ್ಲಿ ರಾಜೀವ್ ಗಾಂಧಿ ವಿವಿ ಕ್ಯಾಂಪಸ್​ ಕಾಮಗಾರಿ ಶೀಘ್ರ ಆರಂಭ - ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ

ರಾಮನಗರದಲ್ಲಿ ಉದ್ದೇಶಿಸಿರುವ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನಿರ್ಮಾಣಕ್ಕಾಗಿ 216 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರ್ಕಾರಿ ಜಮೀನು ಸ್ವಾಧೀನ ಮಾಡಿಕೊಂಡಿರುವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

ಡಿಸಿಎಂ ಅಶ್ವತ್ಥನಾರಾಯಣ
ಡಿಸಿಎಂ ಅಶ್ವತ್ಥನಾರಾಯಣ
author img

By

Published : Feb 10, 2021, 3:26 PM IST

ರಾಮನಗರ: ರಾಮನಗರದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

ಇಂದು ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು, ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್‌ ಗಾಂಧಿ ವಿವಿ ಕುಲಪತಿ ಡಾ. ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ

ಬಳಿಕ ಮಾತನಾಡಿದ ಅವರು, ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್‌ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.

ಭೂಮಿ ವರ್ಗಾಯಿಸಲಾಗಿದೆ:

ಈಗಾಗಲೇ 216 ಎಕರೆ ಭೂಮಿಯನ್ನು ಆರೋಗ್ಯ ವಿವಿಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರ್ಕಾರಿ ಜಮೀನು ಸ್ವಾಧೀನ ಮಾಡಿಕೊಂಡಿರುವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ ಎಂದರು.

ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್‌ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.