ರಾಮನಗರ: ನಗರಸಭೆ ಕಾರ್ಯವೈಖರಿ, ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಜನ ಜಾಗೃತಿ ವೇದಿಕೆ, ವಿವಿಧ ಸಂಘಟನೆಗಳಿಂದ ಇಂದು ರಾಮನಗರ ಬಂದ್ಗೆ ಕರೆ ನೀಡಲಾಗಿದೆ.
ಜನ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶೇಷಾದ್ರಿ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಬೆಳಗ್ಗೆ 11 ಗಂಟೆಗೆ ರಾಮನಗರದ ಮಿನಿ ವಿಧಾನಸೌಧದಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯು ಮೆರವಣಿಗೆ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಲಿದೆ.
ರಾಮನಗರ ನಗರಸಭೆಯಲ್ಲಿ ನಡೆಯುತ್ತಿರುವ ಅಕ್ರಮ ನಿಲ್ಲಬೇಕು. ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಸ್ಥಳಾಂತರ ಮಾಡುವುದನ್ನ ಕೈ ಬಿಡಬೇಕು ಎಂದು ಹೋರಾಟ ನಡೆಸಲಾಗುವುದು.
ಓದಿ: 12ನೇ ದಿನವೂ ಇಂಧನ ಬೆಲೆ ಏರಿಕೆ: ಬೆಂಗಳೂರಲ್ಲಿ ಪೆಟ್ರೋಲ್ ದರ ಎಷ್ಟು ಗೊತ್ತೆ?
ಮುಂಜಾಗ್ರತಾ ಕ್ರಮವಾಗಿ ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.