ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದಿದೆ.
ರಾಮನಗರದ ಅಕ್ಕಪಕ್ಕದ ಗ್ರಾಮಗಳಿಗೆ ನುಗ್ಗಿ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ ಮೇಲೆ ಒತ್ತಡ ಹೇರಿದ್ದರು. ಒತ್ತಾಯಕ್ಕೆ ಮಣಿದ ಇಲಾಖೆ 2 ದಿನಗಳ ಹಿಂದೆ ಚಿರತೆ ಸೆರೆಗೆ ಬೋನಿಟ್ಟಿತ್ತು. ಇಂದು ಬೆಳ್ಳಂಬೆಳಗ್ಗೆ ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆ ಸುಮಾರು 6 ತಿಂಗಳು ಪ್ರಾಯದ್ದು ಎಂದು ಊಹಿಸಲಾಗಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆಯನ್ನು ಮುತ್ತತ್ತಿ ಕಾಡಿಗೆ ಬಿಡುವ ಚಿಂತನೆ ನಡೆಸಿದ್ದಾರೆ.