ರಾಮನಗರ : ಚನ್ನಪಟ್ಟಣ ನಗರದ ತಟ್ಟೆಕೆರೆ ತಮಿಳರ ಕಾಲೋನಿ ಬಳಿ ತಡರಾತ್ರಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ತಟ್ಟೆಕೆರೆಯ ಕುಮಾರ ಎಂಬುವರ ಪುತ್ರ ಪ್ರವೀಣ್ ಎಂಬಾತ ಕೊಲೆಗೀಡಾದ ಯುವಕ. ತಲೆ ಹಾಗೂ ಎದೆಯ ಭಾಗಕ್ಕೆ ಬಲವಾದ ಆಯುಧದಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ವೃತ್ತ ನಿರೀಕ್ಷಕ ದಿವಾಕರ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗೆ ಚನ್ನಪಟ್ಟಣ ಪೂರ್ವ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಒದಿ: ಬಾಲಕಿಗೆ ಮೊಬೈಲ್ ನಂಬರ್ ಕೊಟ್ಟ ಖಾಸಗಿ ಸಿಟಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ