ETV Bharat / state

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಬ್ಲಾಕ್​ ಸ್ಪಾಟ್​ ಗುರುತಿಸಿ: ರಾಮನಗರ ಜಿಲ್ಲಾಧಿಕಾರಿ ಖಡಕ್​ ಸೂಚನೆ - ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ

ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಜಿಲ್ಲೆಯಲ್ಲಿ ರಸ್ತೆ ಹಾಗೂ ವಾಹನ ಸವಾರರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು‌.

DC meeting
DC meeting
author img

By

Published : Sep 7, 2020, 6:13 PM IST

ರಾಮನಗರ: ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿಲ್ಲೆಯ ಒಳಗಿರುವ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರಾಗಿರುವ ಎಂ.ಎಸ್. ಅರ್ಚನಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕವಾಗಿ ಅಪಘಾತ ಸಂಭವಿಸುವಂಥ ಕಪ್ಪು ವಲಯಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ವಾಹನ ಚಾಲಕರು, ಸವಾರರು ಮತ್ತು ಪಾದಚಾರಿಗಳಿಗೆ ಎಚ್ಚರಿಕೆ ನೀಡುವ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ತಿಳಿಸಿದರು.

ಯೂ ಟರ್ನ್​:

ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನಡುವೆ ಬರುವಂತಹ ರಸ್ತೆ ವಿಭಜಕಗಳಿರುವ ಕಡೆಗಳಲ್ಲಿ ಗಿಡ-ಗಂಟಿ ಹಾಗೂ ಮರಗಳು ಬೆಳೆದುಕೊಂಡಿವೆ. ಇದರಿಂದ ವಾಹನ ಚಾಲಕರಿಗೆ ರಸ್ತೆ ನಡುವೆ ಇರುವ ಯು ತಿರುವುಗಳು ಕಾಣಿಸದೆ ಅಪಘಾತವಾಗುತ್ತಿದೆ. ಇದನ್ನು ತಪ್ಪಿಸಲು ಬೆಳೆದಿರುವ ಮರಗಳು ಮತ್ತು ಸಸ್ಯಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಪಾದಚಾರಿ ಮಾರ್ಗ:

ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಕಡೆಗಳಲ್ಲಿ ಅಧಿಕ ಜನ ಸಂದಣಿ ಇರುವ ಪ್ರದೇಶಗಳ ಬಳಿ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಒತ್ತು ನೀಡಬೇಕು. ಹಾಗೆಯೇ, ಇಂತಹ ಹೆದ್ದಾರಿಗಳಲ್ಲಿ ಮೋಟಾರ್ ಸೈಕಲ್ ಮತ್ತು ಸೈಕಲ್ ಗಳಿಗೆ ಪ್ರತ್ಯೇಕ ಟ್ಯ್ರಾಕ್ ಗಳನ್ನು ನಿರ್ಮಿಸುವಂತೆ ಸಲಹೆ ನೀಡಿದರು.

ಅಪಘಾತ ಕಡಿಮೆ:

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಅಪಘಾತದ ಪ್ರಮಾಣದಲ್ಲಿ ಶೇ. 10ರಷ್ಟು ಕಡಿಮೆ ಆಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾಗಿದ್ದರಿಂದ ಅಪಘಾತದ ಸಂಖ್ಯೆಯಲ್ಲಿ ಇಳಿಮುಖವಾಗಿದೆಯೇ ಇಲ್ಲವೆ ಅಳವಡಿಸಿಕೊಂಡ ಸುರಕ್ಷತಾ ಕ್ರಮಗಳಿಂದ ಅಪಘಾತ ಕಡಿಮೆಯಾಗಿದೆಯೇ ಎನ್ನುವುದರ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವುದರ ಜೊತೆಗೆ, ಚಾಲಕರು, ಸವಾರರಿಗೆ ಮತ್ತು ಪಾದಚಾರಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ಅನಧಿಕೃತ ಅಂಗಡಿ ತೆರವು:

ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳ ಎರಡೂ ಬದಿಯಲ್ಲಿ ಇರುವ ಅನಧಿಕೃತ ಅಂಗಡಿಗಳು ಮತ್ತು ಕಾಫಿ - ಟೀ ಮಾರುವವರನ್ನು ಆಯಾ ಆಯಾ ಗ್ರಾಮ ಪಂಚಾಯಿತಿಗಳು ತಕ್ಷಣವೇ ಖಾಲಿ ಮಾಡಿಸಲು ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.

ಟ್ರಾಮಾ ಸೆಂಟರ್:

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಅನುವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತುರ್ತು ಚಿಕಿತ್ಸೆಗಾಗಿ ಟ್ರಾಮಾ ಸೆಂಟರ್ ಅನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾವನೆಯನ್ನು ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.