ರಾಮನಗರ: ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹಾಗೂ ರೂಪಾಂತರಿ ಒಮಿಕ್ರಾನ್ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆ ವ್ಯಾಪ್ತಿಗೆ ಬರುವ ಶ್ರೀ ರಾಮದೇವರ ಬೆಟ್ಟ, ಶ್ರೀರೇವಣ ಸಿದ್ದೇಶ್ವರ ಬೆಟ್ಟ, ಚನ್ನಪಟ್ಟಣದ ಕಣ್ವ ಜಲಾಶಯ, ಮಾಗಡಿಯ ಮಂಚನಬೆಲೆ ಜಲಾಶಯ, ಸಾವನದುರ್ಗ, ಕನಕಪುರ ತಾಲೂಕಿನ ಸಂಗಮ, ಮೇಕೆದಾಟು, ಚುಂಚಿ ಜಲಪಾತ ಪ್ರವಾಸಿತಾಣಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಸದ್ಯ ಆದೇಶವನ್ನು ಡಿಸಿ ಹಿಂಪಡೆದಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು 42,470 ಜನರಿಗೆ ಕೊರೊನಾ ಪಾಸಿಟಿವ್.. 35 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಕೆ
ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂ ರದ್ದಾಗಿದ್ದು, ಉಳಿದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಿಲ್ಲೆಯಲ್ಲಿ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಜಿಲ್ಲಾಡಳಿತವು ಕಾಲ ಕಾಲಕ್ಕೆ ಹೊರಡಿಸುವ ಸರ್ಕಾರದ ಆದೇಶವನ್ನ ಕಡ್ಡಾಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ