ರಾಮನಗರ: ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಮಂಡ್ಯಕ್ಕೆ ವಾಪಸ್ ಆಗುತ್ತಿದ್ದ ಟಿಟಿ ವಾಹನವೊಂದು ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೆಳೆಕೆರೆ ಗ್ರಾಮದ ಹೆದ್ದಾರಿಯಲ್ಲಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿ ಟೆಂಪೋ ಟ್ರಾವೆಲರ್ ವಾಹನ ಚಲಾಯಿಸಿಕೊಂಡು ಬಂದ ಡ್ರೈವರ್ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್: ಚಾಲಕ ಸೇರಿ ಇಬ್ಬರ ದುರ್ಮರಣ