ರಾಮನಗರ: ಜಿಲ್ಲೆಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಖಾಸಗಿ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾಮನಗರದ ವರದಿಗಾರ ಹನುಮಂತು ಮೃತರು. ಶಂಕರ್ ನಾಟಿಕೋಳಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಹನುಮಂತ ಸಾವನ್ನಪ್ಪಿದ್ದಾರೆ.
ಖಾಸಗಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತ ಸ್ರಾವದಿಂದ ಸ್ದಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.