ETV Bharat / state

'ನಾಳೆಯಿಂದ ಶಾಲೆ ಪುನಾರಂಭ: ಆತಂಕ ಬೇಡ, ಧೈರ್ಯವಾಗಿ ಬನ್ನಿ'

ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮಕ್ಕಳ ಯೋಗಕ್ಷೇಮ ವಿಚಾರಿಸಬೇಕು. ಶಾಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದ್ದು, ಮಾರ್ಗಸೂಚಿ ಉಲ್ಲಂಘನೆ ಮಾಡದಂತೆ ಕ್ರಮವಹಿಸಲಾಗಿದೆ ಎಂದು ಚನ್ನಪಟ್ಟಣ ಬಿಇಒ ಮಾಹಿತಿ ನೀಡಿದರು.

ನಾಳೆಯಿಂದ ಶಾಲೆ ಆರಂಭ
ನಾಳೆಯಿಂದ ಶಾಲೆ ಆರಂಭ
author img

By

Published : Oct 24, 2021, 8:30 PM IST

ರಾಮನಗರ: ನಾಳೆಯಿಂದ 1 ರಿಂದ 5 ನೇ ತರಗತಿಗಳು ಆರಂಭವಾಗುತ್ತಿವೆ. ಕಳೆದ ಒಂದೂವರೆ ವರ್ಷದ ಬಳಿಕ ಶಾಲೆಗೆ ಆಗಮಿಸುತ್ತಿರುವ ಮಕ್ಕಳಿಗೆ ಯಾವುದೇ ಭಯ ಆಂತಕಗೊಳ್ಳದೆ ಶಾಲೆಗೆ ಆಗಿಮಿಸುವಂತೆ ಚನ್ನಪಟ್ಟಣ ಬಿಇಒ ಧೈರ್ಯ ತುಂಬಿದ್ದಾರೆ. ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಚನ್ನಪಟ್ಟಣ ಬಿಇಒ, ಕೋವಿಡ್ ಪ್ರಮಾಣ ತಗ್ಗಿದರೂ ಮೈಮರೆಯುವಂತಿಲ್ಲ. ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಲಾ ಕೊಠಡಿಗಳು, ಪೀಠೋಪಕರಣಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಕೊಠಡಿಯಲ್ಲಿ ದೈಹಿಕ ಅಂತರ ಕಾಪಾಡುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಚನ್ನಪಟ್ಟಣ ಬಿಇಒ

ಹಾಗೆಯೇ ಶಿಕ್ಷಣ ಇಲಾಖೆಯಿಂದ ನಮಗೆ ಗೈಡ್ ಲೈನ್ಸ್ ಹಾಕಲಾಗಿದೆ. ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಶಾಲೆಗೆ ಆಗಮಿಸುವ ಮಕ್ಕಳಿಂದ ಪೋಷಕರ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಆದೇಶ ಹೊರಡಿಸಲಾಗಿದೆ.

ಇದಲ್ಲದೆ ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರು ಅನುಮತಿ ಪತ್ರವನ್ನು ಕಡ್ಡಾಯವಾಗಿ ಕಳುಹಿಸಿ ಕೊಡಬೇಕು. ಶಾಲೆಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದರಿಂದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ನೆಗಡಿ, ಕೆಮ್ಮು ಲಕ್ಷಣಗಳಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ. ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ ಬೇಡ, ಆದರೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೋಷಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮಕ್ಕಳ ಯೋಗಕ್ಷೇಮ ವಿಚಾರಿಸಬೇಕು. ಶಾಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದ್ದು, ಮಾರ್ಗಸೂಚಿ ಉಲ್ಲಂಘನೆ ಮಾಡದಂತೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಒಂದೂವರೆ ವರ್ಷದ ಬಳಿಕ ಮಕ್ಕಳು ಶಾಲೆಗೆ ಆಗಮಿಸುತ್ತಿರುವುದರಿಂದ ಅವರಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗಿದ್ದು, ಯಾವುದೇ ಆತಂಕವಿಲ್ಲದೆ ಶಾಲೆಗೆ ಆಗಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.