ರಾಮನಗರ: ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ವಿಡಿಯೋ ಬಿಡುಗಡೆ ಮಾಡಿ, ಪೊಲೀಸರಿಗೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕೆಲವರಿಂದ ಬೆದರಿಕೆ ಮತ್ತು ಮನೆಯ ಮುಂದೆ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ರಾಮನಗರ ಎಸ್ಪಿ ಗಿರೀಶ್ಗೆ ದಿನೇಶ್ ಕಲ್ಲಹಳ್ಳಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕನಕಪುರ ತಾಲೂಕಿನ ಕಲ್ಲಹಳ್ಳಿಯಲ್ಲಿ ದಿನೇಶ್ ನಿವಾಸವಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೇಬಲ್ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.