ರಾಮನಗರ: ಮಾಗಡಿ ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿ ಶಿವಲಿಂಗ ಕಣ್ಣು ತೆರೆದಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ದೇಗುಲಕ್ಕೆ ಭಕ್ತರ ದಂಡೇ ಆಗಮಿಸಿತ್ತು. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುವಂತಾಗಿತ್ತು.
ಹೂವಿನಿಂದ ಅಲಂಕೃತಗೊಂಡಿದ್ದ ಶಿವಲಿಂಗದ ಮೇಲ್ಭಾಗದಲ್ಲಿ ಕಣ್ಣುಗಳ ಆಕೃತಿ ಕಾಣಿಸಿಕೊಂಡಿದೆ. ಇದರಿಂದ ದೇವರೇ ಕಣ್ಣು ಬಿಟ್ಟಿದ್ದಾನೆಂದು ಭಾವಿಸಿದ ಭಕ್ತರು ಶಿವಲಿಂಗದ ಫೋಟೋ, ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ಇದನ್ನು ಕಾಣಲು ಸುತ್ತಮುತ್ತಲಿನ ನೂರಾರು ಜನರು ದೇವಾಲಯಕ್ಕೆ ಬಂದಿದ್ದು, ಕ್ರಮೇಣ ನೂಕುನುಗ್ಗಲು ಉಂಟಾಗಿದೆ. ಕೆಲಕಾಲದ ಬಳಿಕ ಕಣ್ಣಿನ ಆಕೃತಿ ಅದೃಶ್ಯವಾಗಿದ್ದು, ಭಕ್ತರನ್ನು ಅಚ್ಚರಿಗೊಳಿಸಿದೆ. ಭಕ್ತರ ನಿಯಂತ್ರಣಕ್ಕಾಗಿ ಪೊಲೀಸ್ ಭದ್ರತೆ ಕೂಡ ಕಲ್ಪಿಸಲಾಗಿದೆ.
ಇದನ್ನೂ ಓದಿ: ಚಾಮರಾಜನಗರ: ಕುದಿಯುವ ಎಣ್ಣೆಯಲ್ಲಿ ಕೈ ಅದ್ದಿ ಕಜ್ಜಾಯ ತೆಗೆದ ಅರ್ಚಕ.. ಏನಿದು ಚಮತ್ಕಾರ?