ETV Bharat / state

ರೇಷ್ಮೆ ಕೊಳ್ಳಲು ರೀಲರ್ಸ್​ ಹಿಂದೇಟು: ರಾಮನಗರ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ - Reellers' refusal to buy silk

ರೇಷ್ಮೆ ಕೊಳ್ಳಲು ರೀಲರ್ಸ್​ ಹಿಂದೇಟು ಹಾಕಿದ ಪರಿಣಾಮ ರಾಮನಗರ ಮಾರುಕಟ್ಟೆಗೆ ರೇಷ್ಮೆ ತಂದ ರೈತರು ಪ್ರತಿಭಟನೆ ನಡೆಸಿ, ಮಾರಾಟಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿದರು.

Silk growers protest in Ramanagara market
ರಾಮನಗರ ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಪ್ರತಿಭಟನೆ
author img

By

Published : May 17, 2020, 2:07 PM IST

ರಾಮನಗರ: ರೇಷ್ಮೆ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ರೀಲರ್ಸ್​ಗಳು ಸಾಮೂಹಿಕ ಬಹಿಷ್ಕಾರ ಹಾಕಿದ ಪರಿಣಾಮ ನಗರದ ಮಾರುಕಟ್ಟೆಗೆ ರೇಷ್ಮೆ ತಂದಿದ್ದ ರೈತರು ಕೆಲ ಕಾಲ ಆತಂಕಕ್ಕೆ ಒಳಗಾದರು.

ಲಾಕ್ ಡೌನ್​ನಿಂದಾಗಿ ರೇಷ್ಮೆ ಕೊಂಡು ಕೊಳ್ಳಲಾಗದ ಪರಿಸ್ಥಿತಿ ಎದುರಾಗಿದ್ದು, ಸರ್ಕಾರ ಕೂಡ ನೆರವಾಗುತ್ತಿಲ್ಲ ಎಂದು ಆರೋಪಿಸಿ ರೇಷ್ಮೆ ರೀಲರ್ಸ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಬಹಿಷ್ಕಾರ ಹಾಕಿದ್ದರು. ಇದರಿಂದ ರೇಷ್ಮೆ ಬೆಳೆಗಾರರು ಮಾರುಕಟ್ಟೆಗೆ ರೇಷ್ಮೆ ತಂದು ಸಂಕಷ್ಟಕ್ಕೆ ಸಿಲುಕಿದ್ದರು. ರೇಷ್ಮೆ ಮಾರಾಟಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಹಲವು ಭಾರಿ ಅಧಿಕಾರಿಗಳಿಗೆ‌ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಬೇಸತ್ತ ರೈತರು, ಬೆಂಗಳೂರು-ಮೈಸೂರು ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದರು. ಅಲ್ಲದೆ ರೇಷ್ಮೆ ಗೂಡುಗಳನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಪ್ರತಿಭಟನೆ

ಈ ವೇಳೆ ಪೊಲೀಸರು ರೈತರ ಮನವೊಲಿಕೆ ಪ್ರಯತ್ನಪಟ್ಟರು ಸಾಧ್ಯವಾಗಿಲ್ಲ. ಕೊನೆಗೆ ಸದ್ಯದ ಪರಿಸ್ಥಿತಿಯ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿಭಟನಾ ನಿರತರನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.