ಬೆಂಗಳೂರು: ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು ಮತ್ತು ಬೆರಳಚ್ಚು- ನಕಲುಗಾರರ ಹುದ್ದೆಗಳು ಇವಾಗಿವೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿರುವ 6 ಹುದ್ದೆಗಳ ವಿವರ ಹೀಗಿದೆ.
- ಸ್ಟೆನೋಗ್ರಾಫರ್ - 3
- ಟೈಪಿಸ್ಟ್ - 2
- ಟೈಪಿಸ್ಟ್-ಕಾಪಿಸ್ಟ್ - 1
ವಿದ್ಯಾರ್ಹತೆ: ಶೀಘ್ರಲಿಪಿಗಾರ, ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೇ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಹಿರಿಯ ಶ್ರೇಣಿಯ ಟೈಪಿಂಗ್ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಹುದ್ದೆಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕದ ವಿವರ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 100 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್, ಟೈಪಿಂಗ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಉದ್ಯೋಗಾಕಾಂಕ್ಷಿಗಳು ಡಿಸೆಂಬರ್ 22ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 22 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 23 ಆಗಿದೆ.
ಈ ಹುದ್ದೆ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ramanagara.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ, ಬಳ್ಳಾರಿ ಕೋರ್ಟ್ಗಳಲ್ಲಿ ಟೈಪಿಸ್ಟ್, ಜವಾನ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ