ETV Bharat / state

ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟವರ ಅಮಾನತು - ಈಟಿವಿ ಭಾರತ ಕನ್ನಡ

ಬಿಡದಿ ಆರೋಗ್ಯ ಕೇಂದ್ರದಲ್ಲಿ ಲಂಚ ತೆಗೆದುಕೊಂಡ ವಿಡಿಯೋ ವೈರಲ್​ ಆದ ಸಂಬಂಧ ರಾಮನಗರ ಡಿಎಚ್​ಒ ಡಾ. ಕಾಂತರಾಜು ಇಬ್ಬರನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ.

Etv Bharat
ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟವರ ಅಮಾನತು
author img

By

Published : Nov 26, 2022, 7:37 PM IST

ರಾಮನಗರ: ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂ. ಲಂಚ ಕೇಳಿದ್ದ ಮಹಿಳಾ ವೈದ್ಯರನ್ನು ರಾಮನಗರ ಡಿಎಚ್​ಒ ಡಾ. ಕಾಂತರಾಜು ಅಮಾನತು ಮಾಡಿ ಆದೇಶಿಸಿದ್ದಾರೆ. ಬಿಡದಿ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಶಶಿಕಲಾ, ಡಾ.ಐಶ್ವರ್ಯ ಅಮಾನತುಗೊಂಡವರು.

ಬಾಣಂತಿ ರೂಪ ಅವರ ಬಳಿ ಡಿಸ್ಚಾರ್ಜ್ ಮಾಡಲು ವೈದ್ಯೆ ಶಶಿಕಲಾ ಅವರು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ತಕ್ಷಣ ಎಚ್ಚೆತ್ತ ರಾಮನಗರ ಡಿಎಚ್ಒ ಡಾ. ಕಾಂತರಾಜು ಅವರು, ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಶಿಕಲಾ, ಡಾ. ಐಶ್ವರ್ಯ ಅವರನ್ನ ಅಮಾನತು ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಇದು ಬಹಳ ವಿಷಾದದ ಸಂಗತಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಭ್ರಷ್ಟಾಚಾರ ಎಲ್ಲಾ ಕ್ಷೇತ್ರದಲ್ಲೂ ಇದೆ. ಅದನ್ನ ತೊಡೆದು ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಡಿಹೆಚ್​ಒ ಬಳಿ ಮಾತನಾಡಿದ್ದೇನೆ ಎಂದಿದ್ದರು.

ಇದನ್ನೂ ಓದಿ: ರೈತನನ್ನು ಮನೆಗೆ ಕರೆಯಿಸಿ 2 ಲಕ್ಷ ಲಂಚ ಪಡೆಯುತ್ತಿದ್ದ ತಹಶಿಲ್ದಾರ್​.. ರೆಡ್​ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.