ETV Bharat / state

ರಾಮನಗರ: ಕೆಎಸ್​ಆರ್​ಟಿಸಿ ಬಸ್-ಕಾರು ನಡುವೆ ಭೀಕರ ರಸ್ತೆ ಅಪಘಾತ, 6 ಮಂದಿ ಸಾವು - ramanagar crime

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಭೀಕರ ಅಪಘಾತ
ಭೀಕರ ಅಪಘಾತ
author img

By ETV Bharat Karnataka Team

Published : Aug 28, 2023, 6:25 PM IST

Updated : Aug 28, 2023, 10:56 PM IST

ರಾಮನಗರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್ ​ಬಳಿ ಇಂದು ನಡೆದಿದೆ. ಮೃತರನ್ನ‌ು ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತ ಕುಮಾರ್​ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಂಗಳೂರಿನವರು. ಬಸ್​ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ‌ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಎಸ್ಪಿ ಕಾರ್ತಿಕ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಟೋಗೆ ಲಾರಿ ಡಿಕ್ಕಿ ನಾಲ್ವರ ಸಾವು: ಬೀದರ್​ನಲ್ಲಿಂದು ಆಟೊವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮನ್ನಳ್ಳಿ ಕ್ರಾಸ್ ಬಳಿ ನಡೆದಿದೆ. ಪ್ರಮೀಳಾ ಜಗದಾಳೆ (32), ಪತಿ, ಆಟೋ ಚಾಲಕ ಸುನೀಲ ಜಗದಾಳೆ (35), ತಾಯಿ ಅನುಷಾಬಾಯಿ ಜಗದಾಳೆ (60) ಹಾಗೂ ಸಂಬಂಧಿ ಪೂಜಾ ಜಾಧವ್ (17) ಮೃತರು ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗೀತಾ ಜಗದಾಳೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಲಾತೂರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರಾವಣ ಸೋಮವಾರ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಚಂಡಕಾಪುರದ ಐತಿಹಾಸಿಕ ಅಮೃತಕುಂಡದ ದರ್ಶನಕ್ಕೆಂದು ಆಟೋದಲ್ಲಿ ಬಂದಿದ್ದರು. ದರ್ಶನ ಮುಗಿಸಿ ಗ್ರಾಮಕ್ಕೆ ಹಿಂದಿರುಗಿದಾಗ ಮನ್ನಳ್ಳಿ ಕ್ರಾಸ್ ಬಳಿ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಒಟ್ಟು ಎಂಟು ಜನರು ಪ್ರಯಾಣಿಸುತ್ತಿದ್ದರು. ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಮೂವರು ಉಮರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಆಟೋದಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸಿಪಿಐ ಅಲಿಸಾಬ್, ಸಂಚಾರಿ ಠಾಣೆ ಪಿಎಐ ಸುವರ್ಣ ಮಲಶೆಟ್ಟಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಕಾಫಿನಾಡು ಚಿಕ್ಕಮಗಳೂರಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಲ್ಲಮ್ಮ (60) ಮೃತರೆಂದು ಗುರುತಿಸಲಾಗಿತ್ತು. ಅದೇ ದಿನ ಚಿಕ್ಕಮಗಳೂರು ತಾಲೂಕಿನಲ್ಲಿ ಲಾರಿ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಮಂಜುನಾಥ್ (45) ಮೃತರು ಎಂದು ಗುರುತಿಸಲಾಗಿತ್ತು. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕಂಟೈನರ್‌ನಡಿ ಮಲಗಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Last Updated : Aug 28, 2023, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.