ರಾಮನಗರ: ಸಿಎಂ ಯಡಿಯೂರಪ್ಪ ಅವರ ಪತ್ನಿಯ ಸಾವು ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಅದು ಅನುಮಾನಾಸ್ಪದ ಸಾವಾಗಿತ್ತು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವನ್ನಪ್ಪಿದ್ದರು ಅನ್ನೋದು ನಿಗೂಢವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಒಂದು ಅಡಿ ನೀರಿನ ಸಂಪ್ಲ್ಲಿ ಬಿದ್ದು ಮೃತಪಟ್ಟಿದ್ದು ಅನುಮಾನಾಸ್ಪದ ಅಲ್ಲವೇ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೆ, ಇದರ ಬಗ್ಗೆ ಯಾರೂ ಕೂಡ ಪ್ರಚಾರ ಮಾಡಲ್ಲ. ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು, ನನಗೆ ರಾಜಕೀಯ ಅವಶ್ಯಕತೆ ಇಲ್ಲ. ಜನರಿಗಾಗಿ ಮಾತ್ರ ಇನ್ನೂ ರಾಜಕೀಯದಲ್ಲಿ ಇದ್ದೇನೆ ಎಂದರು.
ಸಿಬಿಐ, ಐಟಿ, ಇಡಿ ಅಧಿಕಾರಿಗಳಿಗೆ ಸವಾಲ್
ಪಸ್ತುತ ರಾಜಕೀಯದಿಂದ ಬೇಸತ್ತಿದ್ದೇನೆ. ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ. ನಮ್ಮ ಮನೆ ಹತ್ತಿರ ಯಾವ ಸಿಬಿಐ, ಐಟಿ, ಇಡಿ ಅಧಿಕಾರಿಗಳು ಅವರು ಬರ್ತಿರಾ ಬನ್ನಿ. ನಾನು ಯಾವ ಅಧಿಕಾರಿಗೂ ತೊಂದರೆ ಕೊಟ್ಟಿಲ್ಲ. ಎಲ್ದಕ್ಕೂ ಸಿದ್ಧವಾಗಿದ್ದೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.